Menu

Heart Attack: ಹಾಸನದಲ್ಲಿ ಮುಂದುವರಿದ ಹೃದಯಾಘಾತ ಸರಣಿ: ಮತ್ತೆ ಮೂವರು ಬಲಿ

ಹಾಸನ ಜಿಲ್ಲೆಯಲ್ಲಿ ಹೃದಯಾಘಾತದಿಂದ ಸಾವಿನ ಸರಣಿ ಮುಂದುವರಿದಿದ್ದು, ನಿನ್ನೆಯಿಂದ ಮೂವರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಕಳೆದ 40 ದಿನಗಳಲ್ಲಿ ಜಿಲ್ಲೆಯಲ್ಲಿ 21 ಮಂದಿ ಹೃದಯಾಘಾತ ಮೃತಪಟ್ಟಿದ್ದಾರೆ. ಈ ಬೆಳವಣಿಗೆ ಜಿಲ್ಲೆಯ ಜನರಲ್ಲಿ ಆತಂಕ ಮೂಡಿಸಿದೆ.

ಚನ್ನರಾಯಪಟ್ಟಣ ತಾಲೂಕಿನ ಕೆಂಬಾಳು ಗ್ರಾಮದ ಲೋಹಿತ್ (38) ಭಾರತೀಯ ಸೇನೆಯ ಯೋಧ ರಜೆಗೆಂದು ಊರಿಗೆ ಬಂದಿದ್ದ ವೇಳೆ ಜಮೀನಿನಲ್ಲಿ ಉಳುಮೆ ಮಾಡುತ್ತಿದ್ದಾಗ ಹೃದಯಾಘಾತಕ್ಕೆ ಒಳಗಾಗಿದ್ದರು ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಅಸು ನೀಗಿದ್ದಾರೆ.

ಹೊಳೆನರಸೀಪುರ ತಾಲೂಕಿನ ಆಲಗೊಂಡನಹಳ್ಳಿಯ ಮಂಜುನಾಥ್ ಎಂಬವರು ಸೋಮವಾರ (ಇಂದು) ಬೆಳಿಗ್ಗೆ ಬೈಕ್‌ನಲ್ಲಿ ತೆರಳುತ್ತಿದ್ದಾಗ ಹೃದಯಾಘಾತಕ್ಕೆ ಒಳಗಾಗಿಅಸು ನೀಗಿದ್ದಾರೆ. ಬೇಲೂರು ಪಟ್ಟಣದ ಜೆ.ಪಿ. ನಗರದ ಲೇಪಾಕ್ಷಿ (50) ಎಂಬ ಮಹಿಳೆ ಇಂದು ಹೃದಯಾಘಾತಗೊಂಡಿದ್ದು, ಆಸ್ಪತ್ರೆಗೆ ಕರೆದೊಯ್ದರೂ, ಚಿಕಿತ್ಸೆ ಫಲಕಾರಿಯಾಗದೆ ಅಸು ನೀಗಿದ್ದಾರೆ.

Related Posts

Leave a Reply

Your email address will not be published. Required fields are marked *