Menu

ಬಳ್ಳಾರಿಯಲ್ಲಿ ಭಾರಿ ಮಳೆ: ಮನೆಗಳಿಗೆ ನುಗ್ಗಿದ ನೀರು

ಬಳ್ಳಾರಿಯಲ್ಲಿ ತಡರಾತ್ರಿ  ಭಾರಿ ಮಳೆ ಸುರಿದು ಜನಜೀವನ ಅಸ್ತವ್ಯಸ್ತಗೊಂಡಿದೆ. ವಿಶಾಲ್ ನಗರ, ರೂಪನಗುಡಿ ರಸ್ತೆ ಸೇರಿದಂತೆ ಹಲವೆಡೆ ಮನೆಗಳಿಗೆ ನೀರು ನುಗ್ಗಿದೆ. ಇತರ ತಗ್ಗು ಪ್ರದೇಶಗಳಲ್ಲಿಯೂ ಮನೆಗಳಿಗೆ ನೀರು ನುಗ್ಗಿದೆ. ರಾತ್ರಿಯಿಂದಲೇ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.

ಹಿಡಕಲ್, ನಿಪ್ಪಾಣಿ, ಬೀದರ್, ಬೆಂಗಳೂರು, ಆಲಮಟ್ಟಿ, ಮಂಗಳೂರು, ಹುಣಸಗಿ, ಮುಲ್ಕಿ, ಗೌರಿಬಿದನೂರಿನಲ್ಲಿ ಮಳೆಯಾಗಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆಯಾಗಲಿದ್ದು, ಎಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

 

Related Posts

Leave a Reply

Your email address will not be published. Required fields are marked *