Menu

Rain: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಭಾರಿ ಮಳೆ: 9 ಜಿಲ್ಲೆಗಳಿಗೆ ರೆಡ್ ಅಲರ್ಟ್

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಕಾರಣ ಸಮುದ್ರದಲ್ಲಿ 5.8 ಎಂಟು ಅಡಿ ಎತ್ತರಕ್ಕೆ ಸುಳಿಗಾಳಿ ಬೀಸುತ್ತಿದ್ದು, ಹವಾಮಾನ ಇಲಾಖೆ ಒಂಬತ್ತು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕೊಡಗು, ಶಿವಮೊಗ್ಗ, ಬೆಳಗಾವಿ, ಧಾರವಾಡ, ಹಾವೇರಿ, ಚಿಕ್ಕಮಗಳೂರು ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಿದ್ದು, ಐದು ಜಿಲ್ಲೆಗಳ ಅಂಗನವಾಡಿ, ಶಾಲಾ ಕಾಲೇಜಿಗೆ ರಜೆ ನೀಡಲಾಗಿದೆ.

ತೀವ್ರವಾದ ಮಳೆಯ ಕಾರಣ ಧಾರವಾಡ, ಚಿಕ್ಕಮಗಳೂರು, ಉತ್ತರಕನ್ನಡ, ಉಡುಪಿ, ಮಡಿಕೇರಿಯ ಶಾಲಾ ಕಾಲೇಜಿಗೆ ರಜೆ ನೀಡಲಾಗಿದೆ. ಬಾಗಲಕೋಟೆ, ಗದಗ, ವಿಜಯಪುರ, ದಾವಣಗೆರೆ, ಹಾಸನ, ಮೈಸೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಹವಾಮಾನ ಇಲಾಖೆ ಅಧಿಕಾರಿ ಸಿಎಸ್ ಪಾಟೀಲ್‌ ಮಾಹಿತಿ ನೀಡಿದ್ದಾರೆ.

Related Posts

Leave a Reply

Your email address will not be published. Required fields are marked *