Menu

ಹೇಮಾವತಿ ಲಿಂಕ್ ಕೆನಾಲ್‌; ಸ್ವಾಮೀಜಿಗಳಿಬ್ಬರು ಸೇರಿ ಹಲವರ ವಿರುದ್ಧ ಎಫ್‌ಐಆರ್‌

ಹೇಮಾವತಿ ಲಿಂಕ್ ಕೆನಾಲ್ ಕಾಮಗಾರಿ ವಿರೋಧಿಸಿ ಶನಿವಾರ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಇಬ್ಬರು ಸ್ವಾಮೀಜಿಗಳು ಸೇರಿದಂತೆ ನೂರಾರು ರೈತರ ವಿರುದ್ಧ ಗುಬ್ಬಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ತುಮಕೂರಿನಿಂದ ರಾಮನಗರಕ್ಕೆ ನೀರು ಒದಗಿಸುವ ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿಯನ್ನು ವಿರೋಧಿಸಿ ನಿಷೇಧಾಜ್ಞೆಯ ನಡುವೆಯೂ ರೈತರು, ರಾಜಕೀಯ ಮುಖಂಡರು ಶನಿವಾರ ಪ್ರತಿಭಟನೆ ನಡೆಸಿದ್ದರು. ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದಿದ್ದರು. ನೀರಿಗಾಗಿ ಪ್ರತಿಭಟನೆ ನಡೆಸಿದವರ ವಿರುದ್ಧ ಪೊಲೀಸರು ಗುಬ್ಬಿ ಠಾಣೆಯಲ್ಲಿ ಎಫ್‌ಐಆರ್ ದಾಖಲು ಮಾಡಿದ್ದಾರೆ.

ಪ್ರತಿಭಟನೆ ವೇಳೆ ಎಸ್ಪಿ ಮತ್ತು ಪೊಲೀಸ್ ಅಧಿಕಾರಿಗಳ ಮೇಲೆ ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿದ್ದರು. ಹಿಟಾಚಿಗಳನ್ನು ತಾವೇ ಚಾಲನೆ ಮಾಡಿ ಬೃಹತ್ ಗಾತ್ರದ ಪೈಪ್‌ಗಳನ್ನು ಪುಡಿ ಮಾಡಿದ್ದರು.

ತುಮಕೂರು ನಗರ ಶಾಸಕ ಜ್ಯೋತಿಗಣೇಶ್, ತುಮಕೂರು ಗ್ರಾಮಾಂತರ ಶಾಸಕ ಸುರೇಶ್ ಗೌಡ, ತುರುವೇಕೆರೆ ಜೆಡಿಎಸ್ ಶಾಸಕ ಎಂಟಿ ಕೃಷ್ಣಪ್ಪ, ಬಿಜೆಪಿ ಮುಖಂಡ ದಿಲೀಪ್ ಕುಮಾರ್, ಬಿಜೆಪಿ ಜಿಲ್ಲಾಧ್ಯಕ್ಷ ಹೆಬ್ಬಾಕ ರವಿ ಸೇರಿದಂತೆ ಹಲವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಸಾಕ್ಷ್ಯಧಾರದ ಮೇಲೆ ಮತ್ತಷ್ಟು ಎಫ್‌ಐಆರ್ ದಾಖಲಾಗುವ ಸಾಧ್ಯತೆಯಿದೆ.

Related Posts

Leave a Reply

Your email address will not be published. Required fields are marked *