Menu

ಅಕ್ರಮ ಆಸ್ತಿ ಕೇಸ್‌ ರದ್ದು ಕೋರಿ ಕೆಎಸ್‌ ಈಶ್ವರಪ್ಪ ಹೈಕೋರ್ಟ್‌ಗೆ ಸಲ್ಲಿಸಿದ್ದ ಅರ್ಜಿ ವಜಾ

ಆದಾಯ ಮೀರಿ ಅಕ್ರಮ ಆಸ್ತಿ ಗಳಿಕೆ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಮಾಜಿ ಉಪಮುಖ್ಯಮಂತ್ರಿ ಕೆಎಸ್ ಈಶ್ವರಪ್ಪ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್‌ ವಜಾಗೊಳಿಸಿದೆ.

ಈಶ್ವರಪ್ಪ ಪರ ಹಿರಿಯ ವಕೀಲ ಅಶೋಕ್ ಹಾರನಹಳ್ಳಿ ಅರ್ಜಿ ಸಲ್ಲಿಸಿದ್ದು, ಲೋಕಾಯುಕ್ತ ಪ್ರಕರಣದಲ್ಲಿ ಬಂಧನದಿಂದ ರಕ್ಷಣೆಗೆ ಮನವಿ ಮಾಡಿದ್ದರು. ಲೋಕಾಯುಕ್ತ ಎಸ್​ಪಿಪಿ ವೆಂಕಟೇಶ್ ಅರಬಟ್ಟಿ ಪ್ರತಿವಾದ ಮಂಡಿಸಿ, ತನಿಖೆಗೆ ಸಹಕರಿಸಿದರೆ ಬಲವಂತದ ಕ್ರಮ ಕೈಗೊಳ್ಳುವುದಿಲ್ಲ ಎಂದು ಕೋರ್ಟ್​​ ಮುಂದೆ ಸ್ಪಷ್ಟಪಡಿಸಿದ್ದಾರೆ. ವಾದ ಪ್ರತಿವಾದ ಆಲಿಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ, ಕೇಸ್ ರದ್ದು ಕೋರಿದ್ದ ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿದ್ದಾರೆ.

ಶಿವಮೊಗ್ಗದ ವಕೀಲ ಬಿ.ವಿನೋದ್‌ ಎಂಬವರು ಈಶ್ವರಪ್ಪ, ಅವರ ಪತ್ರ ಕೆ.ಇ.ಕಾಂತೇಶ್‌ ಹಾಗೂ ಕಾಂತೇಶ್‌ ಪತ್ನಿ ಶಾಲಿನಿ ವಿರುದ್ಧ ಆದಾಯಕ್ಕೂ ಮೀರಿದ ಅಕ್ರಮ ಆಸ್ತಿ ಗಳಿಕೆ ಆರೋಪದಡಿ ಲೋಕಾಯುಕ್ತ ಪೊಲೀಸರಲ್ಲಿ ಪ್ರಕರಣ ದಾಖಲಿಸಿದ್ದರು. ಲೋಕಾಯುಕ್ತ ಪೊಲೀಸರು ‘ಬಿ’ ರಿಪೋರ್ಟ್‌ ಸಲ್ಲಿಸಿದ್ದರು. ವಿನೋದ್‌ ಆದನ್ನು ಪ್ರಶ್ನಿಸಿ ಮತ್ತೆ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದರು.

ನ್ಯಾಯಾಲಯವು ಮರು ತನಿಖೆ ಮಾಡಿ ವರದಿ ಸಲ್ಲಿಸುವಂತೆ ಸೂಚನೆ ನೀಡಿತ್ತು. ಅದರಂತೆ ಶಿವಮೊಗ್ಗ ಲೋಕಾಯುಕ್ತ ಪೊಲೀಸರು ಹೊಸದಾಗಿ ಎಫ್‌ಐಆರ್‌ ದಾಖಲಿಸಿದ್ದರು. ಈಶ್ವರಪ್ಪ ಪ್ರಕರಣ ರದ್ದುಗೊಳಿಸುವಂತೆ ಹೈಕೋರ್ಟ್‌ಗೆ ಅರ್ಜಿಸಿ ಸಲ್ಲಿಸಿದ್ದು, ಹೈಕೋರ್ಟ್ ಅರ್ಜಿಯನ್ನು ವಜಾ ಮಾಡಿದೆ.

Related Posts

Leave a Reply

Your email address will not be published. Required fields are marked *