ಗದಗ ತಾಲೂಕಿನ ಹುಲಕೋಟಿ ರೂರಲ್ ಇಂಜಿನಿಯರಿಂಗ್ ಕಾಲೇಜ್ ಬಳಿ ಹೈಸ್ಕೂಲ್ ವಿದ್ಯಾರ್ಥಿಗಳು ಚಲಾಯಿಸುತ್ತಿದ್ದ ಕಾರು ಅಪಘಾತವಾಗಿ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದಾರೆ.
ವೇಗವಾಗಿ ಬಂದ ಕಾರು, ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಮಹಮ್ಮದ್ ಮುಜಾವರ್ (16), ಸಂಜೀವ್ ಗಿರಡ್ಡಿ (16) ಮೃತಪಟ್ಟವರು. ಇಬ್ಬರಿಗೆ ಗಂಭೀರ ಗಾಯಗಳಾಗಿವೆ.
ಅಪ್ರಾಪ್ರ ವಯಸ್ಕ ವಿದ್ಯಾರ್ಥಿಗಳಿಗೆ ಕಾರು ಚಾಲನೆಗೆ ನೀಡಿರುವವರ ವಿರುದ್ಧ ಶಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೊಲೀಸರು ಪ್ರಕರಣದ ಸಮಗ್ರ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಳ್ಳಲಿದ್ದಾರೆ.