Menu

ಚಾಮುಂಡೇಶ್ವರಿಗೆ ಅವಮಾನ ಆರೋಪ: ರಕ್ಷಕ್ ಬುಲೆಟ್ ವಿರುದ್ಧ ಹಿಂದೂ ಹೋರಾಟಗಾರರ ಆಕ್ರೋಶ

ಹಿರಿಯ ನಟ ಬುಲೆಟ್ ಪ್ರಕಾಶ್ ಪುತ್ರ ರಕ್ಷಕ್ ಬುಲೆಟ್ ರಿಯಾಲಿಟಿ ಶೋ ಸ್ಕಿಟ್‌ವೊಂದರಲ್ಲಿ ತಾಯಿ ಚಾಮುಂಡೇಶ್ವರಿ ಹೆಸರು ಪ್ರಸ್ತಾಪಿಸಿ ಹೇಳಿದ್ದ ಡೈಲಾಗ್ ವಿವಾದಕ್ಕೆ ಕಾರಣವಾಗಿ ಹಿಂದೂ ಪರ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಡೈಲಾಗ್‌ ಸೋಷಿಯಲ್ ಮಿಡಿಯಾದಲ್ಲೂ ವೈರಲ್ ಆಗುತ್ತಿದೆ. ಶೋನಲ್ಲಿ ಸ್ಟೇಜ್ ಮೇಲೆ ರಕ್ಷಕ್ ಬುಲೆಟ್ ಅವರು ಸಹನಟಿಗೆ, ನಿಮ್ಮನ್ನು ನೋಡ್ತಿದ್ರೆ ತಾಯಿ ಚಾಮುಂಡೇಶ್ವರಿ ಬೆಟ್ಟದಿಂದ ಇಳಿದು ಬಂದು ಸೀರೆ ಒಡವೆ ಬಿಚ್ಚಿಟ್ಟು, ಪ್ಯಾಂಟು ಶರ್ಟು ಹಾಕೊಂಡು ಸ್ವಿಡ್ಜರ್‌ಲ್ಯಾಂಡ್‌ನಲ್ಲಿ ಟ್ರಿಪ್ ಹೊಡಿತಿದ್ದಾರೆ ಅನ್ನಿಸ್ತಿದೆ ಎಂದು ಡೈಲಾಗ್ ಹೊಡೆದಿದ್ದಾರೆ. ಇದು ಹಿಂದೂ ಹೋರಾಟಗಾರರ ಕೋಪಕ್ಕೆ ಕಾರಣವಾಗಿ ರಕ್ಷಕ್ ಬುಲೆಟ್ ವಿರುದ್ಧ ಬೆಂಗಳೂರು ಪೊಲೀಸ್ ಆಯುಕ್ತರಿಗೆ ದೂರು ನೀಡಲು ಮುಂದಾಗಿದ್ದಾರೆ. ರಕ್ಷಕರ್‌ ಕೂಡಲೇ ಬಹಿರಂಗ ಕ್ಷಮೆಯಾಚಿಸಬೇಕು ಮತ್ತು ಚಾಮುಂಡಿ ಬೆಟ್ಟಕ್ಕೆ ತೆರಳಿ ತಪ್ಪು ಕಾಣಿಕೆ ಸಲ್ಲಿಸಬೇಕು ಎಂದು ಆಗ್ರಹಿಸಿದ್ದಾರೆ.

ಶೋನ ನಿರ್ದೇಕರು ಮತ್ತು ಜಡ್ಜ್ ವಿರುದ್ಧ ಹಿಂದೂ ಮುಖಂಡರು ಕಿಡಿಕಾರಿದ್ದು, ಶೋ ಪ್ರದರ್ಶನಕ್ಕೂ ಮುನ್ನ ಆಗಿರುವ ತಪ್ಪಿನ ಬಗ್ಗೆ ಗಮನ ಇಲ್ಲದೆ ತೋರಿಸಿ ಹಿಂದೂಗಳು ಭಾವನೆಗೆ ಧಕ್ಕೆ ಮಾಡಲಾಗಿದೆ. ಈ ವಿಚಾರದ ಬಗ್ಗೆ ಗಮನ ಹರಿಸದೆ ಇರೋದು ಸಂಬಂಧಿಸಿದ ಎಲ್ಲರ ತಪ್ಪು. ಹಾಗಾಗಿ ದೂರಿನಲ್ಲಿ ಇವರ ಹೆಸರುಗಳನ್ನು ಉಲ್ಲೇಖಿಸುವುದಾಗಿ ತಿಳಿಸಿದ್ದಾರೆ.

 

Related Posts

Leave a Reply

Your email address will not be published. Required fields are marked *