ಎಚ್.ಕೆ.ಪಾಟೀಲ್ ಅವರಿಗೆ ಕೊರೊನಾ ಸೋಂಕು ದೃಢ

ಎಚ್.ಕೆ.ಪಾಟೀಲ್ ಅವರಿಗೆ ಕೊರೊನಾ ಸೋಂಕು ದೃಢ
ಬೆಂಗಳೂರು, ಸೆ.28 (ಯುಎನ್ಐ) ಕಾಂಗ್ರೆಸ್ ಹಿರಿಯ ಶಾಸಕ, ಮಾಜಿ ಸಚಿವ ಎಚ್.ಕೆ.ಪಾಟೀಲ್ ಅವರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ.
ಈ ಬಗ್ಗೆ ಸ್ವತಃ ಟ್ವೀಟ್ ಮಾಡಿರುವ ಪಾಟೀಲ್, ಕೊರೊನಾ ಪರೀಕ್ಷೆ ನಡೆಸಿದಾಗ ಕೊರೊನಾ ಪಾಟಿಸಿವ್ ಬಂದಿದೆ. ಆದರೆ ಯಾವುದೇ ಲಕ್ಷಣಗಳಿಲ್ಲ. 10 ದಿನ ಸ್ವಯಂ ಕ್ವಾರಂಟೈನ್ ನಲ್ಲಿದ್ದೇನೆ. ನಿಮ್ಮ ಹಾರೈಕೆಯಿಂದ ಬೇಗ ಗುಣಮುಖನಾಗುತ್ತೇನೆ. ನನ್ನೊಂದಿಗೆ ಕೆಲವು ದಿನಗಳಿಂದ ಸಂಪರ್ಕ ಹೊಂದಿದ್ದವರು ಪರೀಕ್ಷೆ ಮಾಡಿಸಿಕೊಳ್ಳಬೇಕು ಮತ್ತು ಮುಂಜಾಗೃತಾ ಕ್ರಮಕೈಗೊಳ್ಳಬೇಕು ಎಂದು ಪಾಟೀಲ್ ಮನವಿ ಮಾಡಿದ್ದಾರೆ.

Leave a Reply

Your email address will not be published. Required fields are marked *