Menu

ಬೆಂಗಳೂರಿನ 8 ತಿಂಗಳ ಮಗುವಿನಲ್ಲಿ HMPV ಪತ್ತೆ

ಚೀನಾದಲ್ಲಿ ಹೆಚ್ಚುತ್ತಿದೆ ಎನ್ನಲಾದ ಹ್ಯೂಮನ್ ಮೆಟಾನ್ಯೂಮೋ ವೈರಸ್(HMPV) ಬೆಂಗಳೂರಿನ 8 ತಿಂಗಳ ಮಗುವಿನಲ್ಲಿ ಪತ್ತೆಯಾಗಿದೆ. ಯಾವುದೇ ಟ್ರಾವೆಲ್‌ ಹಿಸ್ಟರಿ ಇಲ್ಲದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಗುವಿನಲ್ಲಿ ಪತ್ತೆಯಾಗಿದೆ.

ಮಗುವಿಗೆ ಜ್ವರದ ಕಾರಣ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ರಕ್ತ ಪರೀಕ್ಷೆ ಮಾಡಿಸಿದಾಗ ಹೆಚ್‌ಎಂವಿಪಿ ವೈರಸ್ ಇರುವುದು ದೃಢಪಟ್ಟಿದೆ. ರಾಜ್ಯದ ಉಳಿದ ಕಡೆ ಎಲ್ಲೆಲ್ಲಿ ಈ ರೀತಿಯ ಸೋಂಕು ಪತ್ತೆಯಾಗಿದೆ ಎಂಬುದರ ಮಾಹಿತಿ ಕಲೆ ಹಾಕಲು ಆರೋಗ್ಯ ಇಲಾಖೆ ಕ್ರಮ ಕೈಗೊಂಡಿದೆ.

HMPV ಹರಡುವ ಬಗ್ಗೆ ಭಯಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಸೇವೆಗಳ ಮಹಾನಿರ್ದೇಶನಾಲಯದ ಅಧಿಕಾರಿ ಡಾ ಅತುಲ್ ಗೋಯೆಲ್ ಈಗಾಗಲೇ ಹೇಳಿದ್ದಾರೆ.

ಚಳಿಗಾಲದಲ್ಲಿ ಉಸಿರಾಟದ ವೈರಸ್ ಸೋಂಕುಗಳು ಉಲ್ಬಣವಾಗುವುದು ಸಾಮಾನ್ಯ. ಕೆಮ್ಮು ಮತ್ತು ಶೀತ ಇದ್ದವರು ಇತರ ಜನರೊಂದಿಗೆ ಸಂಪರ್ಕಕ್ಕೆ ಬರುವುದನ್ನು ತಪ್ಪಿಸಬೇಕು. ಉಸಿರಾಟದ ಸೋಂಕುಗಳ ವಿರುದ್ಧ ಸಾಮಾನ್ಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಂಡರೆ ಸಾಕು. ಉಸಿರಾಟಕ್ಕೆ ಸಂಬಂಧಿಸಿದಂತೆ ದಾಖಲಾದ ರೋಗಿಗಳ ಡೇಟಾವನ್ನು ವಿಶ್ಲೇಷಿಸಿದ್ದೇವೆ. ಡಿಸೆಂಬರ್ 2024ರ ಡೇಟಾದಲ್ಲಿ ಗಣನೀಯ ಹೆಚ್ಚಳ ಕಂಡುಬಂದಿಲ್ಲ ಎಂದು ಮಾಹಿತಿ ನೀಡಿದ್ದಾರೆ.

Related Posts

Leave a Reply

Your email address will not be published. Required fields are marked *