Menu

ಮೆಕ್ಕೆಜೋಳ ಕಟಾವು ವೇಳೆ ಹೆಜ್ಜೇನು ದಾಳಿಗೆ ರೈತ ಮೃತ!

ಉದಯಕಾಲ ನ್ಯೂಸ್, ಶಿವಮೊಗ್ಗ: ಹೆಜ್ಜೇನುಗಳ ಸಾಮೂಹಿಕ ದಾಳಿಗೆ ನಲುಗಿ ರೈತ ಮೃತನಾಗಿರುವ ಅಹಿತಕರ ಘಟನೆ ಶಿವಮೊಗ್ಗ ತಾಲೂಕಿನ ದುಮ್ಮಳ್ಳಿ ಗ್ರಾಮದ ಹೊರವಲಯದ ಮಲವಗೊಪ್ಪದಲ್ಲಿ ನಡೆದಿದೆ. ಜಮೀನಿನಲ್ಲಿ ಮೆಕ್ಕೆಜೋಳ ಕಟಾವು ಮಾಡುವಾಗ ಏಕಾಏಕಿ ಹೆಜ್ಜೇನುಗಳು ದಾಳಿ ನಡೆಸಿದ ಪರಿಣಾಮ, ತೀವ್ರವಾಗಿ ಅಸ್ವಸ್ಥಗೊಂಡಿದ್ದ ರೈತರೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.ಮಲವಗೊಪ್ಪದ ನಿವಾಸಿ ತಿಮ್ಮನಾಯ್ಕ (56) ಮೃತಪಟ್ಟ ದುರ್ದೈವಿ ರೈತ ಎಂದು ಗುರುತಿಸಲಾಗಿದೆ.

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ನಡೆದ ಅನಾಹುತ
ತಿಮ್ಮನಾಯ್ಕ ಅವರು ಬುಧವಾರ ಸಂಜೆ ತಮ್ಮದೇ ಹೊಲದಲ್ಲಿ ಮೆಕ್ಕೆಜೋಳ ಕಟಾವು ಕೆಲಸದಲ್ಲಿ ನಿರತರಾಗಿದ್ದರು. ಈ ವೇಳೆ ಜಮೀನಿನಲ್ಲಿದ್ದ ಹೆಜ್ಜೇನುಗಳು ಏಕಾಏಕಿ ಅವರ ಮೇಲೆ ಎರಗಿಬಂದು ಭೀಕರವಾಗಿ ದಾಳಿ ಮಾಡಿದ್ದವು.ದಾಳಿಯ ರಭಸಕ್ಕೆ ಜೇನುಹುಳುಗಳು ಕಚ್ಚಿ ತೀವ್ರವಾಗಿ ಅಸ್ವಸ್ಥಗೊಂಡು ಸ್ಥಳದಲ್ಲೇ ಕುಸಿದುಬಿದ್ದ ಅವರನ್ನು, ತಕ್ಷಣವೇ ಕುಟುಂಬಸ್ಥರು ಹಾಗೂ ಸ್ಥಳೀಯರು ರಕ್ಷಿಸಿ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ.
ಈ ಅನಿರೀಕ್ಷಿತ ದುರ್ಘಟನೆಯಿಂದ ಮೃತರ ಕುಟುಂಬದಲ್ಲಿ ಶೋಕಮೂಡಿದ್ದು, ಈ ಸಂಬಂಧ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
#ShivamoggaNews #FarmerDeath #HoneyBeeAttack #Malavagoppa #UdayakalaNews #KarnatakaNews #Dummalli #FarmAccident #BreakingNewsKarnataka

Related Posts

Leave a Reply

Your email address will not be published. Required fields are marked *