Wednesday, August 06, 2025
Menu

ನೇಹಾ ಕೊಲೆ ಆರೋಪಿ ಫಯಾಜ್ ಜಾಮೀನು ಅರ್ಜಿ ವಜಾ

ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಪ್ರಕರಣದ ಆರೋಪಿ ಫಯಾಜ್ ಜಾಮೀನು ಅರ್ಜಿಯನ್ನು ನಗರದ ಹೆಚ್ಚುವರಿ ನ್ಯಾಯಾಲಯ ವಜಾಗೊಳಿಸಿದೆ.

2024ರ ಏಪ್ರಿಲ್ 18ರಂದು ನಡೆದಿದ್ದ ನೇಹಾ ಹಿರೇಮಠ ಕೊಲೆ ಪ್ರಕರಣದ ಆರೋಪಿ ಫಯಾಜ್ ಸಲ್ಲಿಸಿದ ಜಾಮೀನು ಅರ್ಜಿಯನ್ನು  ಹುಬ್ಬಳ್ಳಿಯ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ವಿಚಾರಣೆ ನಡೆಸಿ  ವಜಾ ಮಾಡಿ ಆದೇಶ ಹೊರಡಿಸಿದೆ.

ಕಾನ್ಫರೆನ್ಸ್ ಮೂಲಕ ಹಾಜರಾಗಿದ್ದ ಹಂತಕ ಫಯಾಜ್​ ನನ್ನು ಆಗಸ್ಟ್ 6 ರಂದು ಖುದ್ದು ಹಾಜರಿಗೆ ಕೋರ್ಟ್​​​ ಸೂಚಿಸಿದೆ. ಇನ್ನು ಹಂತಕ ಫಯಾಜ್ ಜಾಮೀನು ಅರ್ಜಿ ವಜಾಗೊಳಿಸಿದ ಕೋರ್ಟ್​ನ ಆದೇಶವನ್ನು ನೇಹಾ ಹಿರೇಮಠ ಕುಟುಂಬಸ್ಥರು ಸ್ವಾಗತಿಸಿ ಸಂತಸ ವ್ಯಕ್ತಪಡಿಸಿದ್ದಾರೆ.

ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ನೇಹಾ ತಂದೆ ನಿರಂಜನ ಹಿರೇಮಠ, ನಮಗೆ ಮೊದಲ ಜಯ ಸಿಕ್ಕಿದೆ, ನೇಹಾ ಆತ್ಮಕ್ಕೆ ಶಾಂತಿ ಸಿಕ್ಕಿದೆ. ವಾಮಮಾರ್ಗದ ಮೂಲಕ ಜಾಮೀನು ಪಡೆಯಲು ಯತ್ನ ನಡೆದಿತ್ತು. ಮತ್ತೆ ಯಾರ ಕೊಲೆಗೆ ಸಂಚು ರೂಪಿಸಿದ್ದನೋ ಏನೋ. ಎಲ್ಲರ ಹೋರಾಟಕ್ಕೆ ಮೊದಲ ಹಂತದಲ್ಲಿ ನ್ಯಾಯ ಸಿಕ್ಕಿದೆ. ನಮಗೆ ನ್ಯಾಯ ಸಿಗುತ್ತದೆ ಅನ್ನೋ ಭರವಸೆ ಮೂಡಿದೆ. ಆರೋಪಿ ಫಯಾಜ್​ಗೆ ಬೇಗನೆ ಗಲ್ಲು ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದ್ದಾರೆ.

Related Posts

Leave a Reply

Your email address will not be published. Required fields are marked *