Menu

ಅಸ್ಸಾಂ ರಾಜ್ಯದಲ್ಲಿ ಭಾರಿ ಬದಲಾವಣೆ: ಡಿಕೆ ಶಿವಕುಮಾರ್

“ಅಸ್ಸಾಂ ರಾಜ್ಯದಲ್ಲಿ ಭ್ರಷ್ಟಾಚಾರ ಹೆಚ್ಚಾಗಿದ್ದು, ಜನರು ನರಳುತ್ತಿದ್ದಾರೆ. ಕಳೆದ ಚುನಾವಣೆಯಲ್ಲಿ ಅವರು ಕೊಟ್ಟ ಭರವಸೆಗಳು ಈಡೇರಿಲ್ಲ. ಹೀಗಾಗಿ ಅಸ್ಸಾಂನಲ್ಲಿ ಭಾರಿ ಬದಲಾವಣೆ ಆಗಲಿದೆ” ಎಂದು  ಡಿಕೆ  ಶಿವಕುಮಾರ್ ಹೇಳಿದರು.

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬಳಿ ಮಾಧ್ಯಮಗಳಿಗೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದರು. ಅಸ್ಸಾಂಗೆ ಪ್ರಯಾಣ ಬೆಳೆಸುತ್ತಿರುವ ಬಗ್ಗೆ ಕೇಳಿದಾಗ, “ನಾನು ಅಸ್ಸಾಂ ಚುನಾವಣಾ ಪ್ರಚಾರಕ್ಕೆ ತೆರಳುತ್ತಿದ್ದು, ಕೇರಳಕ್ಕೂ ಹೋಗಬೇಕು ಹಾಗೂ ಕರ್ನಾಟಕದ ಉಪಚುನಾವಣೆಗಳನ್ನು ನೋಡಿಕೊಳ್ಳಬೇಕು. ಅಸ್ಸಾಂ ರಾಜ್ಯದಲ್ಲಿ ಆಡಳಿತ ಕುಸಿದಿದೆ. ಈ ಕಾರಣಕ್ಕೆ ಅಲ್ಲಿನ ಜನ ಬದಲಾವಣೆ ಬಯಸಿದ್ದಾರೆ. ಕಳೆದ ಹತ್ತು ವರ್ಷಗಳಲ್ಲಿ ಜನರ ಪ್ರಗತಿ ಆಗಿಲ್ಲ ಎಂದರು.

ಅಸ್ಸಾಂನಲ್ಲಿ ಸಚಿವ ಸಂಪುಟ ಪುನಾರಚನೆ ಬಳಿಕ ಅಸ್ಸಾಂ ಬಿಜೆಪಿಯಲ್ಲಿ ಆಂತರಿಕ ಕಲಹ ಹೆಚ್ಚಿದೆ. ಅವರ ಪಕ್ಷದಲ್ಲಿ ಯಾರೂ ಸಂತೋಷವಾಗಿಲ್ಲ. ಬಿಜೆಪಿಗರು ತಮ್ಮ ಪಕ್ಷದಲ್ಲಿ ಅವಕಾಶವಿಲ್ಲ ಎಂದು ಬೇಸರಗೊಂಡಿದ್ದಾರೆ ಎಂದು ತಿಳಿಸಿದರು.

Related Posts

Leave a Reply

Your email address will not be published. Required fields are marked *