ವಿಚ್ಛೇದನ ಬಯಸಿದ ಪತ್ನಿಗೆ ಮಚ್ಚಿನಿಂದ ಹೊಡೆದ ಪತಿ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರು ಕೊರಟಗೆರೆ ತಾಲೂಕಿನ ಕೋಟೆಯಲ್ಲಿ ನಡೆದಿದೆ. ಅದಕ್ಕೂ ಮೊದಲು ದಂಪತಿ ನಡುವೆ ಗಲಾಟೆಯಾಗಿತ್ತು ಎನ್ನಲಾಗಿದೆ.
ಮಚ್ಚಿನೇಟಿನಿಂದ ಗಾಯಗೊಂಡಿರುವ ಪತ್ನಿ ನಾಗಮಣಿ ಸಾವು ಬದುಕಿನ ಮಧ್ಯೆ ಆಸ್ಪತ್ರೆಯಲ್ಲಿ ಹೋರಾಟ ನಡೆಸುತ್ತಿದ್ದರೆ, ಪತಿ ಮಾರುತಿ ದೊಡ್ಡನಹಳ್ಳಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೈಸೂರಿನ ಸರ್ಕಾರಿ ಆಸ್ಪತ್ರೆಯ ನರ್ಸ್ ಆಗಿರುವ ನಾಗಮಣಿ ಹಾಗೂ ಮಾರುತಿ 15 ವರ್ಷದ ಹಿಂದೆ ಪ್ರೀತಿಸಿ ಮದುವೆಯಾಗಿದ್ದು, ಎರಡು ಮಕ್ಕಳು ಇವೆ. ಮಾರುತಿ ವೃತ್ತಿಯಲ್ಲಿ ಗಾರೆ ಕೆಲಸ ಮಾಡಿಕೊಂಡಿದ್ದರೆ, ನಾಗಮಣಿಗೆ ಮದುವೆ ನಂತರ ಸರ್ಕಾರಿ ನರ್ಸ್ ಕೆಲಸ ಸಿಕ್ಕಿತ್ತು. ಯಾವಾಗ ನಾಗಮಣಿಗೆ ಸರ್ಕಾರಿ ಕೆಲಸ ಸಿಕ್ಕಿತೋ ಅಂದಿನಿಂದ ಆಕೆಯ ಜೀವನ ಶೈಲಿಯೇ ಬದಲಾಗಿದ್ದು, ಗಾರೆ ಕೆಲಸ ಮಾಡಿಕೊಂಡಿದ್ದ ಪತಿ ಮಾರುತಿಯಿಂದ ನಾಗಮಣಿ ವಿಚ್ಛೇದನ ಪಡೆದುಕೊಳ್ಳಲು ಮುಂದಾಗಿದ್ದಳು.
ನಾಗಮಣಿಗೆ ಮತ್ತೊಬ್ಬನ ಜೊತೆ ಸಂಬಂಧ ಇರುವ ಬಗ್ಗೆ ಮಾರುತಿಗೆ ಅನುಮಾನ ಬಂದಿದ್ದು, ಇದೇ ವಿಚಾರವಾಗಿ ಗಲಾಟೆ ಆಗಿ ಮೈಸೂರಿನ ಸ್ಥಳೀಯ ಠಾಣೆ ತಲುಪಿತ್ತು. ಗಂಡನ ಜೊತೆ ಕೋಟೆಯಲ್ಲಿ ವಾಸವಾಗಿದ್ದ ಮಕ್ಕಳ ನೋಡಲು ನಾಗಮಣಿ ಬಂದಿದ್ದಾಗ ಗಲಾಟೆಯಾಗಿ ಮಾರುತಿ, ಮಚ್ಚಿನಿಂದ ನಾಗಮಣಿ ಮೇಲೆ ಹಲ್ಲೆ ಮಾದ್ದಾನೆ. ಸ್ಥಳೀಯರು ನಾಗಮಣಿಯನ್ನು ಆಸ್ಪತ್ರೆಗೆ ದಾಖಲಿದ್ದರು. ಮರಉದಿನ ಪತಿ ಮಾರುತಿ ದೊಡ್ಡನಹಳ್ಳಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


