ಬೆಂಗಳೂರಿನ ಕೆಪಿ ಅಗ್ರಹಾರದಲ್ಲಿ ಪತ್ನಿ ಮನೆ ಬಿಟ್ಟು ಹೋಗಿದ್ದಕ್ಕೆ ನೊಂದುಕೊಂಡ ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ನಡೆದಿದೆ. ಗೋವರ್ಧನ್ ಆತ್ಮಹತ್ಯೆ ಮಾಡಿಕೊಂಡವರು.
ಗೋವರ್ಧನ್ ಮತ್ತು ಪ್ರಿಯಾ ಏಳು ವರ್ಷಗಳ ಹಿಂದೆ ಮದುವೆಯಾಗಿದ್ದು, ಇಬ್ಬರು ಮಕ್ಕಳಿದ್ದಾರೆ. ಪ್ರಿಯಾ ಆಗಾಗ ಮನೆ ಬಿಟ್ಟು ಹೋಗುತ್ತಿದ್ದಳು. ಒಂದು ತಿಂಗಳ ಹಿಂದೆ ಮನೆಬಿಟ್ಟು ಹೋಗಿದ್ದ ಆಕೆ ಗಂಡನ ಬಳಿ ವಾಪಸಾಗಿಲ್ಲ. ಹೀಗಾಗಿ ಗೋವರ್ಧನ್ ಖಿನ್ನತೆಗೊಳಗಾಗಿದ್ದರು. ಹೀಗಾಗಿ ರಾತ್ರಿ ಮನೆಯಲ್ಲಿ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ನಿನ್ನೆ (ಸೋಮವಾರ) ಸಂಜೆಯಾದರೂ ಮನೆಯಿಂದ ಹೊರಬರದ ಕಾರಣ ಅನುಮಾನ ಉಂಟಾಗಿ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡು ಬಂದಿದೆ.
ಹೆಂಡತಿ ಮನೆ ಬಿಟ್ಟು ಹೋಗಿದ್ದಕ್ಕೆ ನೊಂದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಗೋವರ್ಧನ್ ಸಾವಿಗೆ ಹೆಂಡತಿ ಪ್ರಿಯಾ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.