ಪತ್ನಿಯ ಖಾಸಗಿ ಪೋಟೊಗಳನ್ನು ಪತಿಯು ವಾಟ್ಸಾಪ್ ಗ್ರೂಪ್‌ಗಳಲ್ಲಿ ವೈರಲ್ ಮಾಡಿ ವರದಕ್ಷಿಣೆ ತನ್ನಕಿರುಕುಳ ನೀಡಿದ ಪ್ರಕರಣ ಬೆಂಗಳೂರಿನಲ್ಲಿ ನಡೆದಿದೆ. ಸಂತ್ರಸ್ತೆಯು ಪಶ್ಚಿಮ ವಿಭಾಗದ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ತನ್ನ ಖಾಸಗಿ ಪೋಟೊಗಳನ್ನು ವೈರಲ್ ಮಾಡಿರುವ ವಿಚಾರ ತನಗೆ ಸಂಬಂಧಿಕರಿಂದ ತಿಳಿದಿರುವುದಾಗಿ ಹೇಳಿದ್ದಾರೆ.
ದಂಪತಿಯು ರಾಜಸ್ಥಾನದ ಬಲೋತ್ರ ಜಿಲ್ಲೆಯವರಾಗಿದ್ದು, ಬೆಂಗಳೂರಿನಲ್ಲಿ ವಾಸವಿದ್ದಾರೆ. ಆರೋಪಿ ಪತಿ ವಂದೇಮಾತರಂ, ಸ್ವಂತ ವ್ಯಾಪಾರಕ್ಕಾಗಿ 4 ಕೋಟಿ ರೂಪಾಯಿ ವರದಕ್ಷಿಣೆಯಾಗಿ ನೀಡುವಂತೆ ಪತ್ನಿಯ ಕುಟುಂಬಕ್ಕೆ ಬೇಡಿಕೆ ಇಟ್ಟಿದ್ದಾನೆ.
ಅವರು ಈ ಬೇಡಿಕೆಯನ್ನು ಈಡೇರಿಸಲು ಸಾಧ್ಯವಾಗಿಲ್ಲ, ಅದಕ್ಕೆ ಪ್ರತಿಯಾಗಿ ಪತಿಯು ಪತ್ನಿಯ ಖಾಸಗಿ ಪೋಟೋಗಳನ್ನು ವಾಟ್ಸಾಪ್ ಗ್ರೂಪ್‌ಗಳಲ್ಲಿ ವೈರಲ್ ಮಾಡಿರುವುದಾಗಿ ಪತ್ನಿ ದೂರಿನಲ್ಲಿ ತಿಳಿಸಿದ್ದಾರೆ. ಸಂತ್ರಸ್ತೆಯು ಪತಿಯಲ್ಲಿ ಈ ಬಗ್ಗೆ ವಿಚಾರಿಸಿದಾಗ ಆತ ಆಕೆಯ ಮೇಲೆ ಹಲ್ಲೆ ನಡೆಸಿರುವ ಆರೋಪವೂ ಇದೆ. ನೊಂದ ಸಂತ್ರಸ್ತೆಯು ಪಶ್ಚಿಮ ವಿಭಾಗದ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಪೊಲೀಸರು ಆರೋಪಿ ಪತಿಯ ವಿರುದ್ಧ ಎಫ್‌ಐಆರ್ ದಾಖಲಿಸಿ ಪ್ರಕರಣದ ತನಿಖೆ ಕೈಗೊಂಡಿದ್ದು, ಶೀಘ್ರ ವಿಚಾರಣೆ ನಡೆಸುವುದಾಗಿ ತಿಳಿಸಿದ್ದಾರೆ.