Tuesday, November 18, 2025
Menu

ಗೌರಿಬಿದನೂರಿನಲ್ಲಿ ಕುಡಿದು ಬಂದಿದ್ದನ್ನು ಪ್ರಶ್ನಿಸಿದ್ದಕ್ಕೆ ಪತ್ನಿಯ ಕೊಲೆಗೈದ ಪತಿ

ಗೌರಿಬಿದನೂರು ತಾಲೂಕಿನ ಹುದುಗೂರು ಗ್ರಾಮದಲ್ಲಿ ಕುಡಿದು ಬಂದಿದ್ದನ್ನು ಪ್ರಶ್ನಿಸಿದ್ದಕ್ಕೆ ಪತಿಯೊಬ್ಬ ಪತ್ನಿಯನ್ನು ಕೊಲೆ ಮಾಡಿರುವ ಘಟನೆ ನಡೆದಿದೆ. ಪಾವನಿ(30) ಕೊಲೆಯಾದ ಮಹಿಳೆ.  ಕೊಲೆ ಆರೋಪಿ ರಾಘವೇಂದ್ರನನ್ನು ಪೊಲೀಸರು ಬಂಧಿಸಿದ್ದಾರೆ.

ಐದು ವರ್ಷಗಳ ಹಿಂದೆ ಪಾವನಿ ಹಾಗೂ ರಾಘವೇಂದ್ರ ಮದುವೆಯಾಗಿದ್ದರು. ಇತ್ತೀಚೆಗೆ ರಾಘವೇಂದ್ರ ಊರಿಗೆ ಬಂದಿದ್ದರೂ ಮನೆಗೆ ಬರದಿರುವುದಕ್ಕೆ ಪ್ರಶ್ನಿಸಿದ ಪಾವನಿ, ಕುಡ್ಕೊಂಡು ಎಲ್ಲೋ ಬಿದ್ದಿರ್ತಿಯಾ ಮನೆಗೆ ಬರಲು ಆಗಲ್ವಾ ಎಂದಿದ್ದಾಳೆ. ರಾಘವೇಂದ್ರ ಪತ್ನಿ ಜೊತೆ ಗಲಾಟೆ ಶುರುಮಾಡಿ ವಿಕೋಪಕ್ಕೆ ಹೋಗಿದ್ದು, ಕುತ್ತಿಗೆಗೆ ವೇಲ್ ಬಿಗಿದು ಕೊಲೆ ಮಾಡಿದ್ದಾನೆ. ತಾಯಿ ಮೃತಪಟ್ಟಿದ್ದರೆ ತಂದೆ ಜೈಲು ಸೇರಿರುವ ಕಾರಣ 4 ವರ್ಷದ ಗಂಡು ಮಗು ಅನಾಥವಾಗಿದೆ.

ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ

ಬೆಂಗಳೂರಿನ ರಾಜಗೋಪಾಲನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ 28 ವರ್ಷದಮಹಿಳೆಯ ಮೃತದೇಹ ಪತ್ತೆಯಾಗಿದೆ. ಮೃತ ಮಹಿಳೆಯನ್ನು ಎಡ್ವಿನ್ ಎಂದು ಗುರುತಿಸಲಾಗಿದ್ದು, ಪತಿಯೇ ಹತ್ಯೆಗೈದಿರುವ ಆರೋಪ ಕೇಳಿಬಂದಿದೆ.

ಏಳು ವರ್ಷಗಳ ಹಿಂದೆ ಮಗಳ ಮದುವೆ ಆಗಿದ್ದು, ಹಣದ ವಿಚಾರಕ್ಕೆ ಜಗಳವಾಗಿ ಪತಿಯೇ ಎಡ್ವಿನ್​​ ಅವರನ್ನು ಕೊಂದಿದ್ದಾರೆಂದು ಪೋಷಕರು ಆರೋಪಿಸಿದ್ದಾರೆ. ಎಡ್ವಿನ್ ದೇಹದ ಮೇಲೆ ಗಾಯದ ಗುರುತುಗಳು ಪತ್ತೆಯಾಗಿದ್ದು, ಕೈ ಬಳೆಗಳು ಸಂಪೂರ್ಣ ಪುಡಿ ಪುಡಿಯಾಗಿವೆ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರಗೆ ರವಾನಿಸಲಾಗಿದ್ದು, ರಾಜಗೋಪಾಲ ನಗರ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಪತಿಯನ್ನು ಕಟ್ಟಡದಿಂದ ತಳ್ಳಿ ಕೊಂದ ಪತಿ

ಬೆಂಗಳೂರಿನ ಅಂದ್ರಹಳ್ಳಿಯ ಮಂಜುನಾಥ ಬಡಾವಣೆಯಲ್ಲಿ ಸೋದರ ಮಾವನ ಜತೆ ಸೇರಿ ಕಟ್ಟಡದ ಮೇಲಿಂದ ತಳ್ಳಿ ಪತಿಯನ್ನೇ ಪತ್ನಿ ಕೊಲೆ ಮಾಡಿರುವ ಘಟನೆ ನಡೆದಿದೆ. ಪತಿ ವೆಂಕಟೇಶ್ (65) ಕೊಲೆಯಾದವ. ಕೊಲೆಗೈದ ಪತ್ನಿ ಪಾರ್ವತಿ ಮತ್ತು ಆಕೆಯ ಸೋದರ ಮಾವ ರಂಗಸ್ವಾಮಿಯನ್ನು ಬ್ಯಾಡರಹಳ್ಳಿ ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ.

ವೆಂಕಟೇಶ್ 10 ವರ್ಷಗಳ ಹಿಂದೆ ಮೊದಲ ಪತ್ನಿಯನ್ನು ಬಿಟ್ಟಿದ್ದರು. 6 ವರ್ಷಗಳ ಹಿಂದೆ ಪಾರ್ವತಿಯನ್ನು ಮದುವೆಯಾಗಿದ್ದರು. ಪಾರ್ವತಿ ಮನೆಯನ್ನು ತನ್ನ ಹೆಸರಿಗೆ ಮಾಡುವಂತೆ, ಇಲ್ಲವಾದರೆಆರು ಲಕ್ಷ ರೂ. ಕೊಡುವಂತೆ ಪತಿ ಜತೆ ಗಲಾಟೆ ಮಾಡಿದ್ದರು. ಇದಕ್ಕೆ ಒಪ್ಪದ ವೆಂಕಟೇಶ್ 2.5 ಲಕ್ಷ ರೂ. ನೀಡುವುದಾಗಿ ಹೇಳಿದ್ದರು. ಇದೇ ವಿಚಾರಕ್ಕೆ ಗಲಾಟೆಯಾಗಿ ಪಾರ್ವತಿ ಮತ್ತು ಆಕೆಯ ಸೋದರಮಾವ ಸೇರಿ ಕೊಲೆ ಮಾಡಿದ್ದಾರೆ.

Related Posts

Leave a Reply

Your email address will not be published. Required fields are marked *