Menu

Domestic Violence: ಸೆಕ್ಸ್‌ಗೆ ನಿರಾಕರಿಸಿದ ಪತ್ನಿಗೆ ಬೆಂಕಿ ಹಚ್ಚಿದ ಪತಿ

ಹೆಂಡತಿ ಲೈಂಗಿಕ ಕ್ರಿಯೆಗೆ ನಿರಾಕರಿಸಿದಳೆಂದು ವ್ಯಕ್ತಿಯೊಬ್ಬ ಹೆಂಡತಿಗೆ ಬೆಂಕಿ ಹಚ್ಚಿದ ಘಟನೆ ಮುಂಬೈನ ಚೆಂಬೂರಿನಲ್ಲಿ ನಡೆದಿದೆ. ಆರೋಪಿಯನ್ನು ಬಂಧಿಸಲಾಗಿದ್ದು, ಸುಟ್ಟ ಗಾಯಗಳಾಗಿರುವ ಸಂತ್ರಸ್ತೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ದಿನೇಶ್ ಅವ್ಹಾದ್ ಹೆಂಡತಿಯೊಂದಿಗೆ ಲೈಂಗಿಕ ಕ್ರಿಯೆ ನಡೆಸಲು ಬಯಸಿದ್ದನು. ಆದರೆ ಆಕೆ ಕೆಲಸಕ್ಕೆ ಹೋಗಲು ತಡವಾಗುತ್ತಿದೆ ಎಂದು ಹೇಳಿ ಆಕೆ ನಿರಾಕರಿಸಿದಳು. ಕುಪಿತಗೊಂಡ ಜಗಳ ತೆಗೆದು ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದ್ದಾನೆ ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

ಸಂತ್ರಸ್ತ ಮಹಿಳೆ ಮನೆ ಕೆಲಸ ಮಾಡುತ್ತಿದ್ದರು. ದಿನೇಶ್ ಗ್ಯಾಸ್ ಸ್ಟವ್‌ನಿಂದ ಕಾಗದಕ್ಕೆ ಬೆಂಕಿ ಹಚ್ಚಿ ಆಕೆಯ ಮೇಲೆ ಎಸೆದಿದ್ದಾನೆ. ಇದರಿಂದ ಆಕೆಗೆ ಗಂಭೀರ ಗಾಯಗಳಾಗಿದ್ದು, ಸಿಯೋನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಂತ್ರಸ್ತೆ ನೀಡಿದ ದೂರಿನ ಆಧಾರದ ಮೇಲೆ ಆರೋಪಿ ದಿನೇಶ್ ಅವ್ಹಾದ್‌ನನ್ನು ಕೊಲೆ ಯತ್ನ ಮತ್ತು ಇತರ ಅಪರಾಧಗಳಿಗಾಗಿ ಬಂಧಿಸಲಾಗಿದೆ.

Related Posts

Leave a Reply

Your email address will not be published. Required fields are marked *