Monday, September 14, 2026
Menu

ಪತ್ನಿಯ ಕೊಂದು ತಲೆ ಫ್ರಿಡ್ಜ್‌ನಲ್ಲಿಟ್ಟಿದ್ದ ಪತಿ ಪೊಲೀಸ್‌ ವಾಹನದಿಂದ ಜಿಗಿದು ಸಾವು

ಗುವಾಹಟಿಯ ಹತಿಗಾಂವ್‌ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಪತ್ನಿಯನ್ನು ಕೊಂದು ತಲೆ ಕತ್ತರಿಸಿ ಫ್ರಿಡ್ಜ್‌ನಲ್ಲಿಟ್ಟಿದ್ದ ಪತಿ ಪೊಲೀಸ್‌ ವಾಹನದಿಂದ ಜಿಗಿದು ಮೃತಪಟ್ಟಿದ್ದಾನೆ.

ರಾಮಾನುಜ್ ಗೋಸ್ವಾಮಿ (30) ಪೊಲೀಸ್ ವಾಹನದಿಂದ ಜಿಗಿದು ಮೃತಪಟ್ಟಾತ, ಗುವಾಹಟಿಯ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ಮುಗಿಸಿ ರಾಮಾನುಜ್ ಗೋಸ್ವಾಮಿಯನ್ನು ಪೊಲೀಸರು ಹತಿಗಾಂವ್ ಪೊಲೀಸ್ ಠಾಣೆಗೆ ಕರೆದೊಯ್ಯುತ್ತಿದ್ದಾಗ ಈ ಘಟನೆ ನಡೆದಿದೆ.

ನರಕಾಸುರ ಪಹಾರ್ ಪ್ರದೇಶದ ಬಳಿ ಪೊಲೀಸ್ ವಾಹನ ಚಲಿಸುತ್ತಿರುವಾಗಲೇ ರಾಮಾನುಜ್ ಇದ್ದಕ್ಕಿದ್ದಂತೆ ಪೊಲೀಸ್ ಸಿಬ್ಬಂದಿ ಮೇಲೆ ದಾಳಿ ಮಾಡಲು ಯತ್ನಿಸಿ ವಾಹನದಿಂದ ಜಿಗಿದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಗಾಯಗೊಂಡಿದ್ದ ರಾಮಾನುಜನನ್ನು ಪೊಲೀಸರು ತಕ್ಷಣ ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ವೈದ್ಯರು ಆತ ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ.

ಗುವಾಹಟಿಯಲ್ಲಿರುವ ಫ್ಲ್ಯಾಟ್‌ನಲ್ಲಿ 25 ವರ್ಷದ ಪತ್ನಿ ರಿಯಾ ತಾಲುಕ್ದಾರ್ ಅವರನ್ನು ನಡತೆ ಅನುಮಾನಿಸಿ ಹತ್ಯೆ ಮಾಡಿದ್ದ. ಫ್ಲ್ಯಾಟ್‌ನಿಂದ ದುರ್ವಾಸನೆ ಬರುತ್ತಿದೆ ಎಂದು ಪಕ್ಕದ ನಿವಾಸಿಗಳು ದೂರು ನೀಡಿದ ಬಳಿಕ ಪ್ರಕರಣ ಬಯಲಾಗಿದೆ. ಪೊಲೀಸರು ಪರಿಶೀಲನೆ ನಡೆಸಿದಾಗ ಫ್ರಿಜ್‌ನಲ್ಲಿದ್ದ ಪಾಲಿಥಿನ್ ಬ್ಯಾಗ್‌ನಲ್ಲಿ ರಿಯಾಳ ಕತ್ತರಿಸಿದ ತಲೆ ಹಾಗೂ ಬೆರಳುಗಳು ಪತ್ತೆಯಾಗಿದ್ದವು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹತ್ಯೆ ಬಗ್ಗೆ ಯಾವುದೇ ಪಶ್ಚಾತ್ತಾಪ ಅಥವಾ ಕ್ಷಮೆಯಾಚನೆ ಇಲ್ಲ ಎಂದು ಹೇಳಿದ್ದ ಎನ್ನಲಾಗಿದೆ. ತನ್ನ ಪತ್ನಿಯ `ಶುಗರ್ ಡ್ಯಾಡಿ’ ಎಂದು ಹೇಳಿಕೊಂಡಿದ್ದ ವ್ಯಕ್ತಿಯನ್ನು ಜೈಲಿನಿಂದ ಬಿಡುಗಡೆಯಾದ ಬಳಿಕ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

Related Posts

Leave a Reply

Your email address will not be published. Required fields are marked *