Menu

Donald Trumph: ಭಾರತ-ಪಾಕ್‌ ಯುದ್ದ ನಿಲ್ಲಿಸಿದ್ದು ನಾನು: ಮುಂದುವರಿದ ಟ್ರಂಪ್‌ ರಾಗ

donald trump

ನಾನು ವ್ಯಾಪಾರವನ್ನು ಅಸ್ತ್ರವನ್ನಾಗಿ ಬಳಸಿಕೊಂಡು ಭಾರತ ಮತ್ತು ಪಾಕಿಸ್ತಾನದ ನಡುವೆ ಅಣು ಯುದ್ಧ ನಡೆಯುವ ಸಾಧ್ಯತೆಯನ್ನು ತಪ್ಪಿಸಿ, ಎರಡೂ ದೇಶಗಳ ನಾಯಕರನ್ನು ಕದನ ವಿರಾಮಕ್ಕೆ ಒಪ್ಪಿಸಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಮತ್ತೆ ಹೇಳಿದ್ದಾರೆ.

ತಮ್ಮ ಏರ್‌ಫೋರ್ಸ್‌ ಒನ್‌ ವಿಮಾನದಲ್ಲಿ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ಭಾರತ ಮತ್ತು ಪಾಕ್‌ ನಡುವಿನ ಕದನ ವಿರಾಮಕ್ಕೆ ತಾನೇ ಕಾರಣ ಎಂದು ಇದೀಗ 12ನೇ ಬಾರಿ ಹೇಳಿಕೊಂಡಿದ್ದಾರೆ. ಬಹುತೇಕರಿಗೆ ಗೊತ್ತಿಲ್ಲದ ಕೆಲಸ ನಾನು ಮಾಡಿದ್ದೇನೆ. ನಾವು ಗಂಭೀರ ಸಮಸ್ಯೆಯೊಂದನ್ನು ಪರಿಹರಿಸಿದ್ದೇವೆ. ಪಾಕಿಸ್ತಾನ ಮತ್ತು ಭಾರತದ ನಡುವೆ ಅಣುಯುದ್ಧದ ಸಾಧ್ಯತೆ ತಪ್ಪಿಸಿದ್ದೇವೆ ಎಂದಿದ್ದಾರೆ.

ಪಾಕ್‌-ಭಾರತ ಅಣ್ವಸ್ತ್ರ ಹೊಂದಿರುವ ಬಲಿಷ್ಠ ರಾಷ್ಟ್ರಗಳು. ನಾನು ಎರಡೂ ದೇಶಗಳ ನಾಯಕರ ಜತೆ ಮಾತನಾಡಿದೆ. ಯುದ್ಧ ಇದೇ ರೀತಿ ಮುಂದುವರಿದರೆ ಅಮೆರಿಕವು ನಿಮ್ಮ ಜತೆಗೆ ವ್ಯಾಪಾರ ನಿಲ್ಲಿಸಲಿದೆ ಎಂದು ಎಚ್ಚರಿಕೆ ನೀಡಿದೆ. ಎರಡೂ ದೇಶಗಳು ತಕ್ಷಣ ಯುದ್ಧ ನಿಲ್ಲಿಸಿದವು ಎಂದು ಹೇಳಿದ್ದಾರೆ.

ಪಹಲ್ಗಾಂನಲ್ಲಿ ಉಗ್ರರ ದಾಳಿ ಬಳಿಕ ಭಾರತವು ಆಪರೇಷನ್‌ ಸಿಂದೂರ ಕಾರ್ಯಾಚರಣೆ ಮೂಲಕ ಪ್ರತಿದಾಳಿ ನಡೆಸಿ ಉಗ್ರರ ನೆಲೆ ನಾಶ ಮಾಡಿತ್ತು. ಎರಡೂ ದೇಶಗಳು ಪರಸ್ಪರ ವೈಮಾನಿಕ ದಾಳಿ ನಡೆಸಿವೆ. ಪಾಕಿಸ್ತಾನದ ಮನವಿ ಯಂತೆ ಭಾರತ ಕದನ ವಿರಾಮಕ್ಕೆ ಒಪ್ಪಿಕೊಂಡಿತ್ತು.

Related Posts

Leave a Reply

Your email address will not be published. Required fields are marked *