ಐಸಿಸಿ ರ‍್ಯಾಂಕಿಂಗ್ ಪ್ರಕಟ: ಕೊಹ್ಲಿ, ಬುಮ್ರಾ ಅಗ್ರಸ್ಥಾನ ಸ್ಥಿರ

ದುಬೈ: ಐಸಿಸಿ ಪ್ರಕಟಿಸಿದ ನೂತನ ಏಕದಿನ ರ‍್ಯಾಂಕಿಂಗ್ ಪಟ್ಟಿಯಲ್ಲಿ ಬ್ಯಾಟಿಂಗ್ ನಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ, ಬೌಲಿಂಗ್ ನಲ್ಲಿ ಜಸ್ಪ್ರೀತ್ ಬುಮ್ರಾ ಮೊದಲ ಸ್ಥಾನದಲ್ಲೇ ಮುಂದುವರೆದಿದ್ದಾರೆ.

ದಕ್ಷಿಣ ಆಫ್ರಿಕಾದ ಬೌಲರ್ ಫೆಲುಕ್ವಾಯೋ 9 ಸ್ಥಾನ ಏರಿ 35ನೇ ಸ್ಥಾನಕ್ಕೆ ಲಗ್ಗೆಯಿಟ್ಟಿದ್ದಾರೆ. ಮತ್ತೋರ್ವ ಆಫ್ರಿಕಾದ ವೇಗಿ ಲುಂಗಿಸನಿ ಎನ್ ಜಿಡಿ 60ನೇ ಸ್ಥಾನಕ್ಕೆ ಲಗ್ಗೆಯಿಡುವು ದರೊಂದಿಗೆ ವೃತ್ತಿ ಜೀವನದ ಶ್ರೇಷ್ಠ ಸಾಧನೆ ಮಾಡಿದ್ದಾರೆ. ಇಂಗ್ಲೆಂಡ್ ತಂಡ ಮೊದಲ ಸ್ಥಾನದಲ್ಲಿದ್ದರೆ, ಭಾರತ ಎರಡನೇ ಸ್ಥಾನದಲ್ಲಿದೆ. ಆ ಬಳಿಕ, ನ್ಯೂಜಿಲೆಂಡ್, ದ.ಆಫ್ರಿಕಾ ಹಾಗೂ ಪಾಕಿಸ್ತಾನ ತಂಡಗಳು ಮೊದಲ 5 ಸ್ಥಾನಗ ಳಲ್ಲಿವೆ. ಇನ್ನು ಬ್ಯಾಟ್ಸ್ ಮನ್’ಗಳ ಶ್ರೇಯಾಂಕದಲ್ಲೂ ಬದಲಾವಣೆಯಾಗಿಲ್ಲ. ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಜೋ ರೂಟ್, ಡೇವಿಡ್ ವಾರ್ನರ್ ಹಾಗೂ ಶಿಖರ್ ಧವನ್ ಮೊದಲ 5 ಸ್ಥಾನಗಳಲ್ಲಿ ಮುಂದುವರೆದಿದ್ದಾರೆ. ಟಾಪ್ 20 ಪಟ್ಟಿಯಲ್ಲಿ ಧೋನಿ 18ನೇ ಸ್ಥಾನ ಉಳಿಸಿಕೊಂಡಿದ್ದಾರೆ.

ಬೌಲಿಂಗ್ ವಿಭಾಗದ ಟಾಪ್ 5 ಪಟ್ಟಿಯಲ್ಲಿ ಕೂಡ ಯಾವುದೇ ಬದಲಾವಣೆಗಳಾಗಿಲ್ಲ. ಬುಮ್ರಾ ಮೊದಲ ಸ್ಥಾನದಲ್ಲಿದ್ದರೆ, ರಶೀದ್ ಖಾನ್, ಕುಲ್ದೀಪ್‌ ಯಾದವ್, ಟ್ರೆಂಟ್ ಬೌಲ್ಟ್ ಹಾಗೂ ಜೋಸ್ ಹ್ಯಾಜಲ್’ವುಡ್ ಮೊದಲ 5 ಸ್ಥಾನಗಳಲ್ಲಿ ಮುಂದುವರೆದಿದ್ದಾರೆ. ಇನ್ನು ಆಲ್ರೌಂಡರ್ ವಿಭಾಗದಲ್ಲಿ ಭಾರತದ ಯಾವೊಬ್ಬ ಆಟಗಾರನೂ ಸ್ಥಾನ ಪಡೆದಿಲ್ಲ.

ರಶೀದ್ ಖಾನ್ ಅಗ್ರಸ್ಥಾನದಲ್ಲೇ ಮುಂದುವರಿದಿದ್ದರೆ, ಶಕೀಬ್ ಅಲ್ ಹಸನ್, ಮೊಹಮ್ಮದ್ ನಬೀ, ಮಿಚೆಲ್ ಸ್ಯಾಂಟ್ನರ್ ಹಾಗೂ ಮೊಹಮ್ಮದ್ ಹಫೀಜ್ ಟಾಪ್ 5 ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.

, , , , ,

Leave a Reply

Your email address will not be published. Required fields are marked *