ದಲಿತರು ತಿರುಗಿಬಿದ್ದರೆ ಯಾರೂ ತಡೆಯಲು ಸಾಧ್ಯವಿಲ್ಲ. ನಾನಾ ಕಾರಣಗಳಿಗೆ ಅವರು ಸುಮ್ಮನಿದ್ದಾರೆ ಎಂದು ಬಾಬಾ ಸಾಹೇಬ್ ಅಂಬೇಡ್ಕರ್ ವಿರುದ್ಧ ಮಾತನಾಡುವುದನ್ನು ಸಹಿಸಲು ಸಾಧ್ಯವಿಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ದೆಹಲಿಯಲ್ಲಿ ಇದ್ದಾಗ ಬೆಂಗಳೂರು ಸುದ್ದಿ ಗಮನಿಸುತ್ತಿದ್ದೇನೆ. ಕೆಲವು ಸಂವಿಧಾನ ರಚನೆಯಲ್ಲಿ ಅಂಬೇಡ್ಕರ್ ಪಾತ್ರ ಇರಲಿಲ್ಲ. ನಮ್ಮವರೂ ಇದ್ದಾರೆ ಎಂಬ ಹೇಳಿಕೆಗಳನ್ನು ನೀಡಿದ್ದಾರೆ. ಆದರೆ ಸಂವಿಧಾನಸ ರಚನೆಯಲ್ಲಿ ಅಂಬೇಡ್ಕರ್ ಪಾತ್ರ ಅತ್ಯಂತ ಪ್ರಮುಖವಾಗಿದ್ದು, ಇತರರ ಕೊಡುಗೆ ಇರಲಿಲ್ಲ ಎಂದರು.
ಎಲ್ಲಾ ಸಮುದಾಯಗಳನ್ನು ಸಮಾನವಾಗಿ ನೋಡಿ ಸಂವಿಧಾನದಲ್ಲಿ ಸಮಾನತೆ ಸಾರಿದ ಅಂಬೇಡ್ಕರ್ ಮಾನವತಾವಾದಿ. ಅಂತಹವರ ಬಗ್ಗೆ ಬಾಯಿಗೆ ಬಂದಂತೆ ಹೇಳಿಕೆ ನೀಡುವುದನ್ನು ನಿಲ್ಲಿಸಬೇಕು. ದಲಿತರು ಸುಮ್ಮನಿದ್ದಾರೆ ಎಂದು ಭಾವಿಸಬೇಡಿ. ಒಂದು ವೇಳೆ ಅವರು ತಿರುಗಿಬಿದ್ದರೆ ಅವರನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಗುಡುಗಿದರು.
ಇದೇ ವೇಳೆ ಮಾಧ್ಯಮದ ಜೊತೆ ಮಾತನಾಡಿದ ಅವರು ಕಾಶ್ಮೀರದಲ್ಲಿ ಧರ್ಮ ನೋಡಿ ಉಗ್ರರು ಹತ್ಯೆ ಮಾಡಿರುವುದು ಖಂಡನೀಯ. ಇಂತಹ ದಾಳಿಗಳನ್ನು ಕಾಂಗ್ರೆಸ್ ಖಂಡಿಸುತ್ತದೆ. ಇಂತಹ ಉಗ್ರರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಲು ಕೇಂದ್ರಕ್ಕೆ ಬೆಂಬಲ ನೀಡಿದ್ದೇವೆ ಎಂದು ಸ್ಪಷ್ಟಪಡಿಸಿದರು.