Saturday, November 22, 2025
Menu

ನಾವು ಡಿಸಿಎಂ ಮಾಡದೇ ಇದ್ದಿದ್ದರೆ ಸಿದ್ದರಾಮಯ್ಯ ಕಡೆ ಕಾಂಗ್ರೆಸ್ ಮೂಸಿಯೂ ನೋಡುತ್ತಿರಲಿಲ್ಲ: ಎಚ್.ಡಿ. ಕುಮಾರಸ್ವಾಮಿ

hd kumarswamy

ನಾವು ಡಿಸಿಎಂ ಮಾಡದೇ ಇದಿದ್ದರೆ ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್ ಮೂಸಿ ನೋಡುತ್ತಿರಲಿಲ್ಲ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

ಬೆಂಗಳಜುರಿನ ಪಕ್ಷದ ರಾಷ್ಟ್ರೀಯ ಮಂಡಳಿ ಸಭೆಯಲ್ಲಿ ಶುಕ್ರವಾರ ಪಾಲ್ಗೊಂಡು ಮಾತನಾಡಿದ ಅವರು, ಈ ಪಕ್ಷದಲ್ಲಿ ರಾಜಕೀಯ ಜನ್ಮ ಪಡೆದು ಎರಡು ಬಾರಿ ಉಪ ಮುಖ್ಯಮಂತ್ರಿಯಾಗಿ ಬೇರೆ ಪಕ್ಷಕ್ಕೆ ಜಂಪ್​ ಮಾಡಿದ ವ್ಯಕ್ತಿ, ನನ್ನ ರಾಜಕೀಯ ಉದ್ಧಾರಕ್ಕೆ ಮತ್ತೊಬ್ಬರು ಕಾರಣರು ಅಂತ ಕೋಲಾರದಲ್ಲಿ ಹೇಳಿದ್ದರು. ನಿನ್ನೆ ಚಾಮರಾಜನಗರದಲ್ಲಿ ಇದೇ ವ್ಯಕ್ತಿ ನಾನು ಜೆಡಿಎಸ್​​ನಲ್ಲಿ ಇದ್ದಿದ್ದರೆ ನಾನು ಸಿಎಂ ಆಗುತ್ತಿರಲಿಲ್ಲ ಎಂದು ಹೇಳಿದ್ದಾರೆ. ನಮ್ಮ ಪಕ್ಷದಲ್ಲಿ ಎರಡು ಸಲ ಡಿಸಿಎಂ ಮಾಡಿದ್ದು ಯಾರು? ನಾವು ಅವರನ್ನು ಡಿಸಿಎಂ ಮಾಡದೇ ಇಲ್ಲದಿದ್ದರೆ ಕಾಂಗ್ರೆಸ್ ಮೂಸಿ ನೋಡುತ್ತಿರಲಿಲ್ಲ ಎಂದು ಟೀಕಿಸಿದರು.

ದೇವೇಗೌಡರ ತ್ಯಾಗ ದೊಡ್ಡದು: ಪಕ್ಷವನ್ನು ಕಟ್ಟಲು ದೇವೇಗೌಡ ಅವರು ಅನುಭವಿಸಿದ ಕಷ್ಟ ಅವರಿಗಷ್ಟೇ ಗೊತ್ತು. ಅವರ ತ್ಯಾಗವನ್ನು ನಾವು ಲಘುವಾಗಿ ಪರಿಗಣಿಸಬಾರದು. ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ರಾಜಕಾರಣವನ್ನು ಬಲಿಷ್ಠವಾಗಿ ಸಂಘಟಿಸಿದವರು ದೇವೇಗೌಡರೇ ಆಗಿದ್ದಾರೆ. ದೇವೇಗೌಡರು ಈ ರಾಜ್ಯಕ್ಕೆ, ರಾಷ್ಟ್ರಕ್ಕೆ ಎಷ್ಟು ಕೊಡುಗೆ ನೀಡಿದ್ದಾರೆ ಎನ್ನುವುದು ಜನರಿಗೆ ಗೊತ್ತಿದೆ. ಹಾಗೆಯೇ ಎಷ್ಟು ಜನ ನಾಯಕರನ್ನು ಬೆಳೆಸಿದರು, ಎಷ್ಟು ಸಮುದಾಯಗಳಿಗೆ ಶಕ್ತಿ ತುಂಬಿದರು ಎಂಬ ಇತಿಹಾಸವನ್ನು ಅಳಿಸಲು ಯಾರಿಂದಲೂ ಸಾಧ್ಯ ಇಲ್ಲ ಎಂದ ಹೆಚ್​​ಡಿಕೆ, ಪಕ್ಷ ಸಂಘಟನೆಯಲ್ಲಿ ಉದಾಸೀನ ಮಾಡುವ ಹಾಗಿಲ್ಲ. ಜಿಲ್ಲಾಧ್ಯಕ್ಷರು ಕಠಿಣವಾಗಿ ಕೆಲಸ ಮಾಡಬೇಕು. ಸಂಘಟನೆಯ ಬದಲಾವಣೆಗಳಿಗೆ ಒಗ್ಗಿಕೊಳ್ಳಬೇಕು ಎಂದು ಕರೆ ನೀಡಿದರು.

Related Posts

Leave a Reply

Your email address will not be published. Required fields are marked *