Thursday, January 08, 2026
Menu

ಐಜಿ ವರ್ತಿಕಾ ಕಟಿಯಾರ್ ವರ್ಗ: ಬಳ್ಳಾರಿ ಘರ್ಷಣೆಗೆ ಮತ್ತೊಂದು ತಲೆದಂಡ

ballary ig vartika

ಬಳ್ಳಾರಿ: ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ನಿವಾಸದ ಮುಂದೆ ಬ್ಯಾನರ್‌ ವಿಚಾರವಾಗಿ ನಡೆದ ಘರ್ಷಣೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸ್‌ ಐಜಿ ವರ್ತಿಕಾ ಕಟಿಯಾರ್ ಅವರನ್ನ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಪೊಲೀಸ್‌ ಐಜಿ ವರ್ತಿಕಾ ಕಟಿಯಾರ್ ವರದಿ ಆಧರಿಸಿ ಇತ್ತೀಚೆಗೆ ಎಸ್ಪಿ ಪವನ್‌ ನೆಜ್ಜೂರು ಅವರನ್ನು ಅಮಾನತುಗೊಳಿಸಿದ್ದ ರಾಜ್ಯ ಸರ್ಕಾರ ಇದೀಗ ವರ್ತಿಕಾ ಕಟಿಯಾರ್ ಅವರನ್ನು ಕೂಡ ವರ್ಗಾವಣೆ ಮಾಡಿ ಬುಧವಾರ ಆದೇಶ ಹೊರಡಿಸಿದೆ.

ಬಳ್ಳಾರಿ ವಲಯಕ್ಕೆ ನೂತನ ಐಜಿ ಆಗಿ ಪಿಎಸ್ ಹರ್ಷ ಹಾಗೂ ನೂತನ ಎಸ್ಪಿ ಆಗಿ ಡಾ.ಸುಮನ್ ಡಿ ಪೆನ್ನೇಕರ್ ಅವರನ್ನ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.

ಜ.1 ರಂದು ಬಳ್ಳಾರಿ ಎಸ್‌ಪಿಯಾಗಿ ಪವನ್ ನೆಜ್ಜೂರ್ ಶೋಭಾರಾಣಿ ಅವರಿಂದ ಅಧಿಕಾರ ಸ್ವೀಕರಿಸಿದ್ದರು. ಬ್ಯಾನರ್‌ ಗಲಾಟೆ ಪ್ರಕರಣವನ್ನು ಸರಿಯಾಗಿ ನಿರ್ವಹಣೆ ಮಾಡಿಲ್ಲ ಎಂಬ ಕಾರಣ ನೀಡಿ ಅಮಾನತು ಮಾಡಲಾಗಿತ್ತು.

ಬಳ್ಳಾರಿ ರೇಂಜ್ ಐಜಿ ಆಗಿದ್ದ ವರ್ತಿಕಾ ಕಟಿಯಾರ್‌ ಈ ಪ್ರಕರಣವನ್ನ ಹಿರಿಯ ಅಧಿಕಾರಿಗಳ ಗಮನಕ್ಕೆ ತಂದಿಲ್ಲ. ಹೀಗಾಗಿ ಇವರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಡಿಜಿ-ಐಜಿಪಿ ಕಡೆಯಿಂದ ಸರ್ಕಾರಕ್ಕೆ ವರದಿ ಸಲ್ಲಿಕೆಯಾಗಿತ್ತು. ಹೀಗಾಗಿ ಐಜಿ ವರ್ತಿಕಾ ಕಟಿಯಾರ್‌ ಅವರನ್ನ ಸರ್ಕಾರ ವರ್ಗಾವಣೆ ಗೊಳಿಸಿದೆ ಎಂದು ಹೇಳಲಾಗಿದೆ.

Related Posts

Leave a Reply

Your email address will not be published. Required fields are marked *