ಅಕ್ರಮ ಆಸ್ತಿ ಗಳಿಕೆ ಆರೋಪ ಎದುರಿಸುತ್ತಿರುವ ಕಾಂಗ್ರೆಸ್ ಶಾಸಕ ಟಿ.ಡಿ.ರಾಜೇಗೌಡ ಅವರ ಚಿಕ್ಕಮಗಳೂರು ತಾಲೂಕಿನ ಖಾಂಡ್ಯ ಹೋಬಳಿಯ ಬಸಾಪುರ ಗ್ರಾಮದ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಿದೆ.
ಕೋರ್ಟ್ ನಿರ್ದೇಶನದಂತೆ ರಾಜೇಗೌಡ ವಿರುದ್ಧ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಾಗಿತ್ತು, ಎಫ್ಐಆರ್ ದಾಖಲಾದ ಬಳಿಕ ಲೋಕಾಯುಕ್ತ ಪೊಲೀಸರಿಂದ ತನಿಖೆ ಚುರುಕುಗೊಂಡಿದೆ. ಶೃಂಗೇರಿ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಶಾಸಕ ರಾಜೇಗೌಡ, ಪತ್ನಿ ಪುಷ್ಪ ಹಾಗೂ ಮಗನ ವಿರುದ್ಧ ಪ್ರಕರಣ ದಾಖಲಾಗಿದೆ.
2 ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಟಿ.ಡಿ. ರಾಜೇಗೌಡ ಚುನಾವಣಾ ಆಯೋಗಕ್ಕೆ ಸಲ್ಲಿಸಿದ ಅಫಿಡೆವಿಟ್ ನಲ್ಲಿ ಆಸ್ತಿ ಘೋಷಣೆ ಮಾಡದ ಬಗ್ಗೆ ದೂರು ಸಲ್ಲಿಕೆಯಾಗಿತ್ತು. ಶಾಸಕರಾಗಿ ಅಕ್ರಮ ಆಸ್ತಿ ಸಂಪಾದನೆ ಮಾಡಿರುವ ಬಗ್ಗೆ ಬಿಜೆಪಿ ಮುಖಂಡ ದಿನೇಶ್ ಹೊಸೂರು ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಜನಪ್ರತಿನಿಧಿಗಳ ನ್ಯಾಯಾಲಯದ ಸೂಚನೆ ಅನ್ವಯ ಚಿಕ್ಕಮಗಳೂರು ಲೋಕಾಯುಕ್ತ ಕಚೇರಿಯಲ್ಲಿ ಪ್ರಕರಣ ದಾಖಲಾಗಿದೆ.
ಅಕ್ರಮ ಆಸ್ತಿ ಗಳಿಕೆ ಆರೋಪದಡಿ ಲೋಕಾಯುಕ್ತ ತನಿಗಖೆಗೆ ನಾನು, ಪತ್ನಿ, ಮಗ ಸಂಪೂರ್ಣ ಸಹಕರಿಸಿ ಸತ್ಯ ಹೊರಬಲು ನೆರವಾಗುವುದಾಗಿ ಟಿ.ಡಿ.ರಾಜೇಗೌಡ ಹೇಳಿದ್ದಾರೆ.