Menu

Lokayukta raid- ಅಕ್ರಮ ಗಳಿಕೆ: ರಾಜ್ಯದ ನಾನಾ ಕಡೆ ಲೋಕಾಯುಕ್ತ ದಾಳಿ

ಬೆಂಗಳೂರು, ಮೈಸೂರು, ಕೊಪ್ಪಳ ಮತ್ತು ಬಳ್ಳಾರಿಯ ಸರ್ಕಾರಿ ಅಧಿಕಾರಿಗಳಿಗಳ ಮನೆಗಲು ಸೇರಿದಂತೆ ರಾಜ್ಯದ ನಾನಾ ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಆದಾಯಕ್ಕೂ ಮೀರಿ ಗಳಿಕೆ ಆರೋಪದಡಿ ದಾಳಿ ನಡೆಸಿರುವ ಲೋಕಾಯುಕ್ತ ದಾಳಿ ಸ್ಥಳಗಳಲ್ಲಿ ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದೆ.

ಬೆಂಗಳೂರಿನಲ್ಲಿ ಐಎಎಸ್​ ಸೇರಿ ಮೂವರು ಅಧಿಕಾಗಳ ಮನೆ ಮೇಲೆ ಲೋಕಾಯುಕ್ತ ದಾಳಿಯಾಗಿದೆ. ಆರ್​.ಟಿ.ನಗರದಲ್ಲಿರುವ ಹಿರಿಯ ಐಎಎಸ್ ಅಧಿಕಾರಿ ವಾಸಂತಿ ಅಮರ್​ ಸರ್ಕಾರಿ ಜಮೀನು ಅಕ್ರಮವಾಗಿ ಬೇರೆಯವರ ಹೆಸರಿಗೆ ವರ್ಗಾವಣೆ ಮಾಡಿರುವ ಆರೋಪವಿದೆ, ಹೀಗಾಗಿ ಅವರ ಮನೆಯಲ್ಲಿ ಲೋಕಾಯುಕ್ತ ತಂಡ ಪರಿಶೀಲನೆ ನಡೆಸುತ್ತಿದೆ.

ಮೈಸೂರಿನ ಸಿದ್ದಾರ್ಥ ಬಡಾವಣೆಯಲ್ಲಿರುವ ಪಾಲಿಕೆ ಉಪ ವಿಭಾಗಧಿಕಾರಿ ವೆಂಕಟರಾಮ್​​ ಮನೆ, ಸಾತಗಳ್ಳಿಯ ಜೆಪಿನಗರದಲ್ಲಿರುವ ಕೌಶಲ್ಯಾಭಿವೃದ್ಧಿ ಇಲಾಖೆ ಜಂಟಿ ನಿರ್ದೇಶಕ ಮಂಜುನಾಥಸ್ವಾಮಿ ಮನೆ ಮೇಲೂ ದಾಳಿ ಮಾಡಲಾಗಿದೆ. ಬಳ್ಳಾರಿಯಲ್ಲಿ ಮೂರು ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿನಡೆಸಿದ್ದಾರೆ. ಬೆಂಗಳೂರು ಟೌನ್ ಮತ್ತು ರೂರಲ್ ಪ್ಲ್ಯಾನಿಂಗ್ ಆಫೀಸರ್ ಮಾರುತಿ ಬಗಲಿಗೆ ಸೇರಿದ 3 ಸ್ಥಳಗಳ ಮೇಲೆ ದಾಳಿ ಮಾಡಿರುವಲೋಕಾಯುಕ್ತ ತಂಡ ಪರಿಶೀಲನೆ ನಡೆಸಿದೆ. ಬೆಂಗಳೂರು ನಿವಾಸಿ ಮಾರುತಿ ಬಗಲಿ ವಿರುದ್ಧ ರಾಜ್ಯದ ಹಲವೆಡೆ ಆಸ್ತಿ ಮಾಡಿರುವ ಆರೋಪವಿದೆ.

ಕೊಪ್ಪಳ ನಗರದಲ್ಲಿ ದಾಳಿ ಮಾಡಿರುವ ಲೋಕಾಯುಕ್ತ ಅಧಿಕಾರಿಗಳು ಜಿಲ್ಲಾ ಕೈಗಾರಿಕೆ ಮತ್ತು ವಾಣಿಜ್ಯ ವಿಭಾಗದ ಉಪ ನಿದೇರ್ಶಕ ಶೇಕು ಚವ್ಹಾಣ್ ಅವರನ್ನು ಕಕ್ಕಾಬಿಕ್ಕಿಯಾಗಿಸಿದ್ದಾರೆ. ​ಲೋಕಾಯುಕ್ತ ಇನ್ಸ್‌ಪೆಕ್ಟರ್ ಸುನೀಲ ಮೇಗಳಮನಿ ನೇತೃತ್ವದಲ್ಲಿ ಅಭಿಷೇಕ ಬಡಾವಣೆ ಹಾಗೂ ಕೀರ್ತಿ ಕಾಲೊನಿಯಲ್ಲಿರುವಶೇಕು ಚವ್ಹಾಣ್ ​ಗೆ ಸೇರಿದ ಎರಡು ಮನೆಗಳ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ಹುಬ್ಬಳ್ಳಿಯಲ್ಲೂ ಲೋಕಾಯುಕ್ತ ದಾಳಿ ನಡೆಸಿದೆ.

Related Posts

Leave a Reply

Your email address will not be published. Required fields are marked *