ಬೆಂಗಳೂರಿನ ಅವಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕಾಡ ಅಗ್ರಹಾರದಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 225 ಜಿಲೆಟಿನ್ ಕಡ್ಡಿ ಹಾಗೂ 50 ಡಿಟೋನೇಟರ್ ಪತ್ತೆಯಾಗಿದ್ದು, ಪೊಲೀಸರು ವಶಪಡಿಸಿಕೊಂಡು ಯಾವ ಕಾರಣಕ್ಕೆ ಸ್ಫೋಟಕ ಸಂಗ್ರಹಿಸಿಡಲಾಗಿತ್ತು ಎಂಬ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.
ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ ಪೊಲೀಸರು, ಜಿಲೆಟಿನ್ ಕಡ್ಡಿಗಳುಹಾಗೂ ಡಿಟೋನೇಟರ್‌ಗಳನ್ನು ಜಪ್ತಿ ಮಾಡಿದ್ದಾರೆ. ಪರವಾನಗಿ ಇಲ್ಲದೆ ವೆಂಕಟರಾಮ ರೆಡ್ಡಿ ಎಂಬಾತ ಈ ಪ್ರಮಾಣದಲ್ಲಿ ಸ್ಫೋಟಕ ಸಂಗ್ರಹಿಸಿಟ್ಟಿರುವುದು ಅನುಮಾನಕ್ಕೆ ಕಾರಣವಾಗಿದೆ.
ಜಮೀನಿನಲ್ಲಿ ಬಂಡೆಗಳನ್ನು ಒಡೆಯಲು ಈ ಸ್ಫೋಟಕಗಳನ್ನು ತರಲಾಗಿತ್ತು ಎಂದು ಹೇಳಲಾಗುತ್ತಿದೆ. ಆದರೆ ಪರವಾನಗಿ ಇಲ್ಲದೆ ಇಷ್ಟು ದೊಡ್ಡ ಪ್ರಮಾಣದಲ್ಲಿ ಸ್ಫೋಟಕಗಳನ್ನು ದಾಸ್ತಾನು ಮಾಡಿರುವುದು ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ. ಸ್ಫೋಟಕಗಳ ಕಾಯಿದೆ, 1884 ರ ಅಡಿ ಪ್ರಕರಣ ದಾಖಲಾಗಿದೆ. ಲು ಮಾಡಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಕೆಲವು ದಿನಗಳ ಹಿಂದೆ ಪ್ರಧಾನಿ ನರೇಂದ್ರ ಮೋದಿಯ ಬೆಂಗಳೂರು ಭೇಟಿ ವೇಳೆ ಆರ್ಟ್ ಆಫ್ ಲಿವಿಂಗ್ ಬಳಿಯ ರಸ್ತೆಯಲ್ಲಿ ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿದ್ದು ಆತಂಕ ಸೃಷ್ಟಿಯಾಗಿತ್ತು.
2.33 ಕೋಟಿ ರೂಪಾಯಿ ಮೌಲ್ಯದ ಗಾಂಜಾ ವಶ
ದೇವನಹಳ್ಳಿಯಲ್ಲಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬ್ಯಾಂಕಾಕ್‌ನಿಂದ ಬಂದಿದ್ದ ಪ್ರಯಾಣಿಕನಿಂದ ದುಬಾರಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಗಾಂಜಾವನ್ನು ಕಸ್ಟಮ್ಸ್ ಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಪ್ರಯಾಣಿಕರನ್ನು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸುವಾಗ ಒಬ್ಬ ಪ್ರಯಾಣಿಕನ ಲಗೇಜ್ ಬ್ಯಾಗ್ ಮೇಲೆ ಅನುಮಾನ ಉಂಟಾಗಿ ಕೂಲಂಕಷವಾಗಿ ಪರಿಶೀಲಿಸಿದಾಗೆ ಅಡಗಿಸಿಟ್ಟಿದ್ದ ದುಬಾರಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಪತ್ತೆಯಾಗಿದೆ. ಗಾಂಜಾ 6.66 ಕೆಜಿ ತೂಕವಿದ್ದು, ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ 2.33 ಕೋಟಿ ರೂಪಾಯಿ ಮೌಲ್ಯವಿದೆ ಎನ್ನಲಾಗಿದೆ.
ಆರೋಪಿಯನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದು ಡ್ರಗ್ಸ್ ಜಾಲದ ಹಿಂದೆ ಯಾರಿದ್ದಾರೆ, ಬೆಂಗಳೂರಿನಲ್ಲಿ ಯಾರಿಗೆ ತಲುಪಿಸಲು ತರಲಾಗುತ್ತಿತ್ತು ಎಂಬ ಬಗ್ಗೆ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ.


