Thursday, February 12, 2026
Menu

ಹಾಸನದಲ್ಲಿ ವ್ಯಕ್ತಿಯ ಸಾಯಿಸಿ ಶವ ಮುಚ್ಚಿಟ್ಟ ಕಾಡಾನೆ

ಹಾಸನದ ಆಲೂರು ತಾಲೂಕಿನ ಅಡಿಬೈಲು ಗ್ರಾಮದಲ್ಲಿ ಕಾಡಾನೆಯೊಂದು ವೃದ್ಧರೊಬ್ಬರ ಮೇಲೆ ದಾಳಿ ನಡೆಸಿ ಕೊಂದು ಹಾಕಿದ್ದಲ್ಲದೆ ಶವದ ಮೇಲೆ ಕಾಫಿ ಗಿಡಗಳನ್ನು ಮುಚ್ಚಿಟ್ಟು ಹೋಗಿರುವುದು ಪತ್ತೆಯಾಗಿದೆ.

ಕಾಡಾನೆ ದಾಳಿಗೆ ಬಲಿಯಾದ ವೃದ್ಧರನ್ನು ಪುಟ್ಟಯ್ಯ (78) ಎಂದು ಗುರುತಿಸಲಾಗಿದೆ. ಮಗ್ಗೆ ಗ್ರಾಮದಿಂದ ಅಡಿಬೈಲು ಗ್ರಾಮಕ್ಕೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಆನೆ ದಾಳಿ ನಡೆಸಿ, ಕಾಲಿನಿಂದ ತುಳಿದು ಮರಕ್ಕೆ ಅಪ್ಪಳಿಸಿದೆ. ಇದರಿಂದ ಅವರು ಸ್ಥಳದಲ್ಲೇ ಅಸು ನೀಗಿದ್ದಾರೆ.

ಬಳಿಕ ಆನೆ ಶವಕ್ಕೆ ಕಾಫಿ ಗಿಡಗಳನ್ನು ಮುಚ್ಚಿ ಹೋಗಿದೆ. ಬುಧವಾರ ಮುಂಜಾನೆ ಕಾಫಿ ತೋಟದಲ್ಲಿ ಪುಟ್ಟಯ್ಯ ಅವರ ಶವ ಪತ್ತೆಯಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related Posts

Leave a Reply

Your email address will not be published. Required fields are marked *