Menu

ನಾಗಮಂಗಲದಲ್ಲಿ ಅಣ್ಣನ ಗನ್‌ ಆಟಕ್ಕೆ 3 ವರ್ಷದ ಮಗು ಬಲಿ

ಹದಿಮೂರು ವರ್ಷದ ಬಾಲಕನೊಬ್ಬ ಆಟವಾಡುವಾಗ ಆಕಸ್ಮಿಕವಾಗಿ ತನ್ನ 3 ವರ್ಷದ ತಮ್ಮನ ಮೇಲೆ ಗುಂಡು ಹಾರಿಸಿದ್ದರಿಂದ ಆ ಮಗುವಿನ ಹೊಟ್ಟೆ ಛಿದ್ರವಾಗಿದ್ದು ಅಸು ನೀಗಿರುವ ಹೃದಯ ವಿದ್ರಾವಕ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನಲ್ಲಿ ನಡೆದಿದೆ.

ನಾಗಮಂಗಲದ ದೊಂದೇಮಾದಿಹಳ್ಳಿಯಲ್ಲಿ ಕಾಂಗ್ರೆಸ್ ಮುಖಂಡ ನರಸಿಂಹಮೂರ್ತಿ ಎಂಬುವರಿಗೆ ಸೇರಿದ ಕೋಳಿ ಫಾರಂನಲ್ಲಿ ಈ ಘಟನೆ ನಡೆದಿದೆ. ಕೋಳಿ ಫಾರಂನಲ್ಲಿ ಭದ್ರತೆಗಾಗಿ ಒಂದು ಅಸಲಿ ಗನ್‌ ಇಡಲಾಗಿತ್ತು. ಅದು ಗುಂಡು ಗಳಿಂದ ಲೋಡ್ ಆಗಿತ್ತು. ಪಶ್ಚಿಮ ಬಂಗಾಳ ಮೂಲದ ಶಶಾಂಕ್ ಹಾಗೂ ಲಿಪಿಕ ದಂಪತಿ ಇಲ್ಲೇ ಕೂಲಿ ಕಾರ್ಮಿಕ ರಾಗಿದ್ದು, 13 ವರ್ಷದ ಬಾಲಕ ಸುದೀಪ್‌ ದಾಸ್‌ನೊಂದಿಗೆ 3 ವರ್ಷದ ಮಗುವನ್ನು ಆಟವಾಡಲು ಬಿಟ್ಟಿದ್ದರು.

ಬಾಲಕ ಸುದೀಪ್ ಮೇಲೆ ಇದ್ದ ಗನ್ ತೆಗೆದುಕೊಂಡು ಕಳ್ಳ-ಪೊಲೀಸ್ ಆಟ ಆಡೋಣ ಎನ್ನುತ್ತಾ 3 ವರ್ಷದ ಮಗುವಿನ ಮೇಲೆ ಶೂಟ್ ಮಾಡಿದ್ದಾನೆ. ಈ ಆಕಸ್ಮಿಕ ಫೈರಿಂಗ್‌ಗೆ ಮಗುವಿನ ಹೊಟ್ಟೆ ಸೀಳಿಹೋಗಿದೆ. ತಾಯಿ ಲಿಪಿಕಾಗೂ ಗಾಯ ವಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ ಮಗುವನ್ನು ನಾಗಮಂಗಲ ಆಸ್ಪತ್ರೆಗೆ ದಾಖಲಿಸಲಾಯಿತು. ತೀವ್ರ ರಕ್ತ ಸ್ರಾವ ಉಂಟಾಗಿದ್ದರಿಂದ ಮಗು ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಮೃತಪಟ್ಟಿದೆ.

ಘಟನಾ ಸ್ಥಳಕ್ಕೆ ಮಂಡ್ಯ ಜಿಲ್ಲಾ ಎಸ್‌ಪಿ ಮಲ್ಲಿಕಾರ್ಜುನ ಬಾಲದಂಡಿ ಭೇಟಿ ನೀಡಿ ಪರಿಶೀಲಿಸಿದ್ದಾರೆ. ನಾಗಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಗನ್ ವಶಕ್ಕೆ ಪಡೆದು ತನಿಖೆ ಕೈಗೊಂಡಿ ದ್ದಾರೆ.

Related Posts

Leave a Reply

Your email address will not be published. Required fields are marked *