90 ಮೀಟರ್ ಏರಿಯಲ್ ಲ್ಯಾಡರ್ ಪ್ಲಾಟ್‍ಫಾರಂ ವಾಹನ’ ಲೋಕಾರ್ಪಣೆ ಅಗ್ನಿಶಾಮಕ ದಳಕ್ಕೆ ದೊಡ್ಡ ಶಕ್ತಿ : ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು, ಅಕ್ಟೋಬರ್ 20: ರಾಜ್ಯದ ಅಗ್ನಿಶಾಮಕ ದಳಕ್ಕೆ ದೊಡ್ಡ ಶಕ್ತಿಯನ್ನು ತುಂಬುವ ಹಾಗೂ ಬೆಂಗಳೂರಿನ ಅಭಿವೃದ್ಧಿಗೆ ಬಹಳ ದೊಡ್ಡ ಕೊಡುಗೆಯನ್ನು ನೀಡುವ ಪ್ರಮುಖ ದಿನವಿದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳು ಇಲಾಖೆಯ ವತಿಯಿಂದ ವಿಧಾನಸೌಧದ ಬೃಹತ್ ಮೆಟ್ಟಿಲುಗಳ ಬಳಿ ಆಯೋಜಿಸಿದ್ದ 90 ಮೀಟರ್ ಏರಿಯಲ್ ಲ್ಯಾಡರ್ ಪ್ಲಾಟ್‍ಫಾರಂ ವಾಹನ ಲೋಕಾರ್ಪಣೆ ಹಾಗೂ ‘ ಹಸಿರು ದೀಪಾವಳಿ ಸಾರ್ವಜನಿಕ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದರು.

ಆಪತ್ಕಾಲದ ಬಂಧು

90 ಮೀಟರ್ ಏರಿಯಲ್ ಏಣಿ ಪ್ರಮುಖವಾದ, ಅತ್ಯಗತ್ಯವಾದ ಸೇವೆ. ಆಧುನಿಕ ಏಣಿಗಳು ಆಪತ್ಕಾಲದಲ್ಲಿ ಬಂಧುಗಳಂತೆ ಕೆಲಸ ಮಾಡುತ್ತವೆ. ನಾಗರಿಕತೆಯಲ್ಲಿ ಬಹಳ ದೊಡ್ಡ ಪ್ರಮಾಣದಲ್ಲಿ ಜಗತ್ತಿನಾದ್ಯಂತ ಬೆಳೆಯುತ್ತಿದೆ. ಎಲ್ಲ ಪ್ರಮುಖ ಮೆಟ್ರೋ ನಗರಗಳಲ್ಲಿ ಇದು ಅತ್ಯಂತ ಅವಶ್ಯಕ ಸೇವೆ. ಇದಿಲ್ಲದೆ ಕಟ್ಟಡಗಳಿಗೆ ಅನುಮತಿ ನೀಡುವುದಿಲ್ಲ. ಅಗ್ನಿ ಸುರಕ್ಷತೆ ಹಾಗೂ ಅಗ್ನಿ ಸುರಕ್ಷತಾ ನಿಯಮಗಳೂ ಅಷ್ಟೇ ಮುಖ್ಯ. ಎತ್ತರದ ಕಟ್ಟಡ ಕಟ್ಟಲು ಅಪತ್ಕಾಲದಲ್ಲಿ ನಿಭಾಯಿಸುವ ಸಲುವಾಗಿ ಅಗ್ನಿಶಾಮಕ ದಳದ ಎಲ್ಲಾ ನಿಯಮಗಳನುಸಾರವಾಗಿ ವ್ಯವಸ್ಥೆ ಇರುವುದು ಮುಖ್ಯ ಎಂದರು.

ಸೇವೆಗೆ ಸಿದ್ದ
ಇದುವರೆಗೂ ಬೆಂಗಳೂರಿನ ಅಗ್ನಿಶಾಮಕ ದಳಕ್ಕೆ 50 ಮೀಟರಿನ ಏಣಿ ಇತ್ತು. ಇಂದು ಬೆಂಗಳೂರು ನಗರ ಬಹಳ ದೊಡ್ಡ ಪ್ರಮಾಣದಲ್ಲಿ ಬೆಳೆಯುತ್ತಿದ್ದು, ಲಂಬವಾಗಿಯೂ ಬೆಳೆಯುತ್ತಿದೆ. ಎತ್ತರದ ಕಟ್ಟಡಗಳನ್ನು ಕಟ್ಟಲು ಇದರ ಅವಶ್ಯಕತೆ ಇದೆ. ವ್ಯವಸ್ಥೆ ಗಳಿಲ್ಲದಿದ್ದರೆ ಎತ್ತರದ ಕಟ್ಟಡಕ್ಕೆ ಅನುಮತಿ ನೀಡಲು ಸಾಧ್ಯವಿಲ್ಲ. ಭಾರತ ದೇಶದಲ್ಲಿ ಮುಂಬೈ ಮಹಾನಗರದಲ್ಲಿ 90 ಮೀಟರ್ ಏಣಿ ಇದೆ. ಮುಂಬೈ ಬಿಟ್ಟರೆ ಬೆಂಗಳೂರಿನಲ್ಲಿ ಮಾತ್ರ ಈ ವ್ಯವಸ್ಥೆ ಇದೆ. ಸುಮಾರು ಎರಡೂವರೆ ವರ್ಷಗಳಿಂದ ಇದನ್ನು ಪಡೆದುಕೊಳ್ಳುವ ಪ್ರಯತ್ನ ನಡೆದಿತ್ತು. ನಾನು ಹಿಂದೆ ಗೃಹ ಸಚಿವನಿದ್ದ ಸಂದರ್ಭದಲ್ಲಿ ಇದಕ್ಕೆ ಆದೇಶ ನೀಡಿ ಅನುದಾನವೂ ಬಿಡುಗಡೆಯಾಗಿತ್ತು. ಕಾರಣಾಂತರಗಳಿಂದ ವಿಳಂಬವಾಯಿತು. ಕೋವಿಡ್ ಮತ್ತು ಉತ್ಪಾದನೆಯ ಸಮಸ್ಯೆಯಾಗಿ ತಡವಾಗಿದೆ. ಬೆಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ತನ್ನ ಸೇವೆಯನ್ನು ನೀಡಲು ಸಿದ್ಧವಾಗಿರುವುದು ಸಂತಸದ ಸಂಗತಿ ಎಂದರು.

, ,

Leave a Reply

Your email address will not be published. Required fields are marked *