Menu

ಹೈದರಾಬಾದ್‌ ನಲ್ಲಿ ಅಗ್ನಿ ದುರಂತಕ್ಕೆ 17 ಮಂದಿ ಬಲಿ

ಹೈದರಾಬಾದ್‌ನ ಚಾರ್ಮಿನಾರ್ ಬಳಿಯ ಕಟ್ಟಡವೊಂದರಲ್ಲಿ ಇಂದು ಬೆಳಿಗ್ಗೆ ಸಂಭವಿಸಿದ ಭಾರಿ ಬೆಂಕಿ ಅವಘಡದಲ್ಲಿ ಎಂಟು ಮಕ್ಕಳು ಮತ್ತು ಐದು ಮಹಿಳೆಯರು ಸೇರಿದಂತೆ ಕನಿಷ್ಠ 17 ಜನರು ಪ್ರಾಣ ಕಳೆದುಕೊಂಡಿದ್ದಾರೆ. ಈ ದುರಂತಕ್ಕೆ ಕಾರಣ ಇನ್ನೂ ದೃಢಪಟ್ಟಿಲ್ಲ, ಶಾರ್ಟ್ ಸರ್ಕ್ಯೂಟ್ ದುರಂತಕ್ಕೆ ಕಾರಣವಾಗಿರ ಬಹುದು ಎಂದು ಶಂಕಿಸಲಾಗಿದೆ. ಘಟನೆ ನಡೆದ ಪ್ರದೇಶದಲ್ಲಿ ಆಭರಣ ಅಂಗಡಿಗಳಿದ್ದು, ಐತಿಹಾಸಿಕ ಚಾರ್ಮಿನಾರ್‌ಗೆ ಬಹಳ ಹತ್ತಿರದಲ್ಲಿದೆ.

ಹನ್ನೊಂದು ಅಗ್ನಿಶಾಮಕ ವಾಹನಗಳು ಬೆಂಕಿಯನ್ನು ನಂದಿಸಿ ಗಾಯಾಳುಗಳನ್ನು ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ. ಬೆಂಕಿಯಲ್ಲಿ ಸಂತ್ರಸ್ತಗೊಂಡ ಕುಟುಂಬವು ಗುಲ್ಜಾರ್ ಹೌಸ್ ಪ್ರದೇಶದಲ್ಲಿ ಅಂಗಡಿಯ ಮೇಲೆ ವಾಸಿಸುತ್ತಿತ್ತು ಎಂದು ಕೇಂದ್ರ ಸಚಿವ ಜಿ ಕಿಶನ್ ರೆಡ್ಡಿ ಮಾಹಿತಿ ನೀಡಿದ್ದಾರೆ.

ನಾನು ಕುಟುಂಬ ಸದಸ್ಯರನ್ನು ಭೇಟಿಯಾದೆ. ಇಂತಹ ಘಟನೆಗಳು ತುಂಬಾ ದುಃಖಕರ. ನಾನು ಯಾರನ್ನೂ ದೂಷಿಸುತ್ತಿಲ್ಲ, ಆದರೆ ಪೊಲೀಸ್, ಪುರಸಭೆ, ಅಗ್ನಿಶಾಮಕ ಮತ್ತು ವಿದ್ಯುತ್ ಇಲಾಖೆಗಳನ್ನು ಬಲಪಡಿಸಬೇಕು. ಇಂದು ಅಗ್ನಿಶಾಮಕ ದಳದ ಬಳಿ ಸರಿಯಾದ ಉಪಕರಣಗಳಿಲ್ಲ ಎಂಬುದು ನನಗೆ ತಿಳಿಯಿತು ಎಂದು ಅವರು ಹೇಳಿದ್ದಾರೆ.

ಮುಂದಿನ ದಿನಗಳಲ್ಲಿ ನಾವು ಉತ್ತಮ ತಂತ್ರಜ್ಞಾನವನ್ನು ತರಬೇಕು. ಕೇಂದ್ರ ಸರ್ಕಾರ ಮತ್ತು ಪ್ರಧಾನಿಯೊಂದಿಗೆ ಮಾತನಾಡುತ್ತೇನೆ ಮತ್ತು ಈ ಘಟನೆಯಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಆರ್ಥಿಕ ಸಹಾಯವನ್ನು ಪಡೆಯಲು ಪ್ರಯತ್ನಿಸುತ್ತೇನೆ ಎಂದು ತಿಳಿಸಿದ್ದಾರೆ.

ಘಟನೆಯ ಬಗ್ಗೆ ಮುಖ್ಯಮಂತ್ರಿ ರೇವಂತ್ ರೆಡ್ಡಿ ಆಘಾತ ವ್ಯಕ್ತಪಡಿಸಿದ್ದು, ಪರಿಹಾರ ಕಾರ್ಯಗಳನ್ನು ಚುರುಕುಗೊಳಿಸುವಂತೆ ಮತ್ತು ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ ಸೂಚಿಸುತ್ತೇನೆ. ಗಾಯಾಳುಗಳು ಬೇಗ ಗುಣಮುಖರಾಗಲಿ. ಮೃತರ ಸಂಬಂಧಿಕರಿಗೆ  2 ಲಕ್ಷ ರೂ. ಪರಿಹಾರ ನೀಡಲಾಗುವುದು. ಗಾಯಾಳುಗಳಿಗೆ 50,000 ರೂ. ನೀಡಲಾಗುವುದು ಎಂದು ಪ್ರಧಾನಿ ಕಚೇರಿ ಎಕ್ಸ್‌ನಲ್ಲಿ ಪೋಸ್ಟ್‌ನಲ್ಲಿ ತಿಳಿಸಿದೆ.

Related Posts

Leave a Reply

Your email address will not be published. Required fields are marked *