ಅನ್‍ ಲಾಕ್‍ನಿಂದ ಸೋಂಕು ಹೆಚ್ಚಳ ಆದರೆ ಕಠಿಣ ಕ್ರಮ: ಸಚಿವ ಸುಧಾಕರ್

ಅನ್‍ಲಾಕ್‍ನಿಂದ ಸೋಂಕು ಹೆಚ್ಚಳ ಆದರೆ ಕಠಿಣ ಕ್ರಮ: ಸುಧಾಕರ್

ಬೆಂಗಳೂರು : ರಾಜ್ಯದಲ್ಲಿ ಸೋಮವಾರದಿಂದ ಕೆಲ ಜಿಲ್ಲೆಗಳನ್ನು ಅನ್ ಲಾಕ್ ಮಾಡಿದ್ದು, ಅನ್ ಲಾಕ್ ನಿಂದ ಕೊರೊನಾ ಸೋಂಕು ಹೆಚ್ಚಳವಾದರೆ ಮತ್ತೆ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೋಮವಾರದಿಂದ ಕೆಲ ಜಿಲ್ಲೆಗಳು ಹಾಗೂ ಕೆಲ ವಲಯಗಳಿಗೆ ಅನ್ ಲಾಕ್ ಘೋಷಣೆ ಮಾಡಲಾಗಿದೆ. ಅನ್ ಲಾಕ್ ಮಾಡಿದರು ಜನರು ಎಚ್ಚರಿಕೆಯಿಂದ ಇರಬೇಕು. ಎರಡು ಡೋಸ್ ಲಸಿಕೆ ಪಡೆಯೋವರೆಗೂ ಜನ ಎಚ್ಚರವಾಗಿ ಇರಬೇಕು. ರಾಜ್ಯದಲ್ಲಿ ಕನಿಷ್ಠ ಶೇ. 70 ಜನರಿಗೆ ಲಸಿಕೆ ಪೂರ್ಣ ಆದ ಬಳಿಕ ನಾವು ಮೊದಲಿನಂತೆ ಆರಾಮವಾಗಿ ಇರಬಹುದು ಎಂದು ಹೇಳಿದ್ದಾರೆ.

ಗ್ರಾಮೀಣ ಭಾಗದಲ್ಲಿ ಎಚ್ಚರವಹಿಸಬೇಕು. ಒಂದು ಗ್ರಾಮದಲ್ಲಿ 5 ಸೋಂಕಿತರು ಕಂಡು ಬಂದರೇ ಅ ಗ್ರಾಮವನ್ನೆ ಸೀಲ್ ಡೌನ್ ಮಾಡಬೇಕು. ಗ್ರಾಮ ಭಾಗದಲ್ಲಿ ಸೋಂಕು ಬಂದ ವ್ಯಕ್ತಿಯನ್ನ ಕೂಡಲೇ ಕೋವಿಡ್ ಕೇರ್ ಸೆಂಟರ್ ಗೆ ಸೇರಿಸಬೇಕು ಎಂದು ಹೇಳಿದರು.

ನಗರ ಭಾಗದಲ್ಲಿ ಜನ ಅನಗತ್ಯವಾಗಿ ಓಡಾಡಬಾರದು. ಬೆಂಗಳೂರು ನೋಡಿದರೆ ನನಗೂ ಭಯ ಆಗುತ್ತೆ. ಜನರು ಎಚ್ಚರಿಕೆಯಿಂದ ಇರಬೇಕು. ಸರ್ಕಾರದ ನಿಯಮ ಎಲ್ಲರೂ ಕಡ್ಡಾಯವಾಗಿ ಪಾಲನೆ ಮಾಡಬೇಕು. 3-4 ತಿಂಗಳಲ್ಲಿ ರಾಜ್ಯದಲ್ಲಿ ಎಲ್ಲರಿಗೂ ಲಸಿಕೆ ಸಿಗುತ್ತೆ. ಅಲ್ಲಿಯವರೆಗೂ ಎಲ್ಲರೂ ಎಚ್ಚರವಾಗಿ ನಿಯಮ ಪಾಲನೆ ಮಾಡಬೇಕೆಂದು ಮನವಿ ಮಾಡಿದರು.

, ,

Leave a Reply

Your email address will not be published. Required fields are marked *