Menu

ಮಹಿಳಾ ವಿಶ್ವಕಪ್ 2025 ಚಾಂಪಿಯನ್‌ ಆಗಿ ಬೀಗಿದ ಭಾರತ

ನವಿ ಮುಂಬೈನಲ್ಲಿ ನಡೆದ ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ ಮಹಿಳಾ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 52 ರನ್​ಗಳ ಜಯದೊಂದಿಗೆ ಚಾಂಪಿಯನ್ ಪಟ್ಟವನ್ನು ತನ್ನದಾಗಿಸಿಕೊಂಡಿದೆ.

ಭಾರತ ತಂಡದಲ್ಲಿ ಶೆಫಾಲಿ ವರ್ಮಾ ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿ 87 ರನ್ ಗಳಿಸಿ ಇತಿಹಾಸ ನಿರ್ಮಿಸಿದ್ದಾರೆ. ಪ್ರತಿಕಾ ರಾವಲ್ ಗಾಯದ ಕಾರಣಕ್ಕೆ ತಂಡ ಸೇರಿಕೊಂಡ ಶೆಫಾಲಿ ವರ್ಮಾ ಪಂದ್ಯವನ್ನು ಕಳೆಗಟ್ಟಿಸಿದ್ದರು.

ನವೀ ಮುಂಬೈನಲ್ಲಿ ಭಾನುವಾರ ನಡೆದ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದ ಸೌತ್ ಆಫ್ರಿಕಾ ತಂಡ ಭಾರತಕ್ಕೆ ಬ್ಯಾಟಿಂಗ್ ನೀಡಿತ್ತು. ಮೊದಲು ಬ್ಯಾಟ್ ಮಾಡಿದ ಭಾರತ ತಂಡ 50 ಓವರ್ ಗಳಲ್ಲಿ 7 ವಿಕೆಟ್ ಕಳೆದುಕೊಂಡು 298 ರನ್ ಗಳಿಸಿತು. ಕಠಿಣ ಗುರಿ ಬೆಂಬತ್ತಿದ ದಕ್ಷಿಣ ಆಫ್ರಿಕಾ ತಂಡ 45.3 ಓವರ್ ಗಳಲ್ಲಿ 246 ರನ್ ಗೆ ಆಲೌಟಾಯಿತು.

ಶೆಫಾಲಿ ವರ್ಮಾ ಹಾಗೂ ಸ್ಮೃತಿ ಮಂಧನಾ ಉತ್ತಮ ಆರಂಭ ನೀಡಿದ್ದರು. ಸ್ಮೃತಿ ಮಂಧನಾ 45 ರನ್ ಬಳಿಕ ಔಟಾದರು. ಶೆಫಾಲಿ ಸ್ಫೋಟಕ ಬ್ಯಾಟಿಂಗ್ ಮೂಲಕ ಸೌತ್ ಆಫ್ರಿಕಾ ತಂಡಕ್ಕೆ ಸವಾಲೊಡ್ಡಿ 78 ಎಸೆತದಲ್ಲಿ 87 ರನ್‌ ಬಾರಿಸಿದರು. ಮಹಿಳಾ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಅರ್ಧಶತಕ ಸಿಡಿಸಿದ ಅತ್ಯಂತ ಕಿರಿಯ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಸೆಮಿಫೈನಲ್ ಪಂದ್ಯದಲ್ಲಿ ಅಬ್ಬರಿಸಿದ ಜೇಮಿಯ ರೋಡಿಗಸ್ ನಾಯಕಿ ಹರ್ಮನ್‌ಪ್ರೀತ್ ಕೌರ್ಕ್ರಮವಾಗಿ 24 ರನ್ , 20 ರನ್ ಗಳಿಸಿ ನಿರ್ಗಮಿಸಿದರು. ದೀಪ್ತಿ ಶರ್ಮಾ ಏಕಾಂಗಿ ಹೋರಾಟ ನೀಡಿದರು. ಅಮನ್‌ಜೋತ್ ಕೌರ್ 12 ರನ್ ಪಡೆದು ಔಟಾದರು. ರಿಚಾ ಘೋಷ್ ಉತ್ತಮ ಪ್ರದರ್ಶನ ನೀಡಿದರು.

ಶೆಫಾಲಿ ವರ್ಮಾ ಟೀಂ ಇಂಡಿಯಾದ ಸಚಿನ್ ತೆಂಡೂಲ್ಕರ್ ಮತ್ತು ವೀರೇಂದ್ರ ಸೆಹ್ವಾಗ್ ಅವರ ದಾಖಲೆಗಳನ್ನು ಮುರಿದಿದ್ದಾರೆ. 78 ಎಸೆತಗಳಲ್ಲಿ 7 ಬೌಂಡರಿ ಮತ್ತು 2 ಸಿಕ್ಸರ್‌ಗಳೊಂದಿಗೆ 87 ರನ್ ಗಳಿಸಿ ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ಹೊಸ ಅಧ್ಯಾಯ ಬರೆದಿದ್ದಾರೆ.

ಭಾರತ ತಂಡಕ್ಕೆ ಸಿಎಂ ಸಿದ್ದರಾಮಯ್ಯ ಅಭಿನಂದನೆ

ಭಾರತೀಯ ಮಹಿಳಾ ಕ್ರಿಕೆಟ್ ತಂಡ ಅದ್ಭುತ ಆಟದ ಮೂಲಕ ವಿಶ್ವಕಪ್ ಕಿರೀಟವನ್ನು ಮುಡಿಗೇರಿಸಿಕೊಂಡಿದೆ. ವಿಶ್ವವಿಜೇತ ಭಾರತೀಯ ಕ್ರಿಕೆಟ್ ಆಟಗಾರ್ತಿಯರಿಗೆ ಅಭಿನಂದನೆಗಳು.

ಇಡೀ‌ ಪಂದ್ಯಾವಳಿಯುದ್ದಕ್ಕೂ ಅತ್ಯಂತ ಸಂಘಟಿತ ಪ್ರದರ್ಶನ ನೀಡುತ್ತಾ ಬಂದಿದ್ದ ಭಾರತೀಯ ಆಟಗಾರ್ತಿಯರು ನಿಜಕ್ಕೂ ಈ ಪ್ರಶಸ್ತಿಗೆ ಅರ್ಹರು. ಕ್ರಿಕೆಟ್ ಪ್ರೇಮಿಯಾದ ನನಗಿದು ಹೆಚ್ಚು ಖುಷಿ ಕೊಟ್ಟಿದೆ. ಇತಿಹಾಸ ಸೃಷ್ಟಿಯಾದ ಈ ದಿನ ಬಹುಕಾಲ ನೆನಪಿನಲ್ಲಿ ಉಳಿಯುವಂತಹುದ್ದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿ ಶುಭ ಹಾರೈಸಿದ್ದಾರೆ.

ಡಿಸಿಎಂ ಡಿಕೆ ಶಿವಕುಮಾರ್‌ ಅವರು  ಭಾರತಕ್ಕೆ ಹೆಮ್ಮೆ ತಂದ  ಮಹಿಳಾ ಕ್ರಿಕೆಟ್‌ ತಂಡಕ್ಕೆ ಅಭಿನಂದಿಸಿ ಎಕ್ಸ್‌ ಪೋಸ್ಟ್‌ನಲ್ಲಿ ಶುಭ ಹಾರೈಸಿದ್ದಾರೆ.

Related Posts

Leave a Reply

Your email address will not be published. Required fields are marked *