Menu

Ahmedabad Air Crash: ಇಂಡಿಯಾ ವಿಮಾನ ದುರಂತ-ಮೃತಪಟ್ಟವರ ಸಂಖ್ಯೆ ಡಿಎನ್​ಎ ಪರೀಕ್ಷೆ ಬಳಿಕ ಪ್ರಕಟ

ಅಹಮದಾಬಾದ್‌ನಲ್ಲಿ ನಡೆದ ಏರ್ ಇಂಡಿಯಾ ವಿಮಾನ ದುರಂತದಲ್ಲಿ ಮೃತಪಟ್ಟವರ ನಿಖರ ಸಂಖ್ಯೆ ಹೇಳಲು ಈಗ ಸಾಧ್ಯವಿಲ್ಲ. ಡಿಎನ್​ಎ ಪರೀಕ್ಷೆಯ ಬಳಿಕವೇ ನಿಖರವಾದ ಸಾವಿನ ಸಂಖ್ಯೆ ತಿಳಿಯಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ಈ ದುರಂತದಿಂದ ಆದ ಪ್ರಾಣಹಾನಿಗೆ ದುಃಖ ವ್ಯಕ್ತಪಡಿಸಿದ ಅಮಿತ್ ಶಾ, ಸರ್ಕಾರವು ಮೃತರ ಕುಟುಂಬಗಳೊಂದಿಗೆ ದೃಢವಾಗಿ ನಿಲ್ಲುತ್ತದೆ ಎಂದು ಭರವಸೆ ನೀಡಿದ್ದಾರೆ.

ಎಲ್ಲಾ ಕೇಂದ್ರ ಮತ್ತು ರಾಜ್ಯ ಸರ್ಕಾರಿ ಇಲಾಖೆಗಳು ರಕ್ಷಣಾ ಕಾರ್ಯಾಚರಣೆಯನ್ನು ನಡೆಸುತ್ತಿವೆ. ಅಪಘಾತಕ್ಕೀಡಾದ ವಿಮಾನದಲ್ಲಿ 230 ಪ್ರಯಾಣಿಕರು ಮತ್ತು 12 ಸಿಬ್ಬಂದಿ ಇದ್ದರು. ಒಬ್ಬ ವ್ಯಕ್ತಿ ಮಾತ್ರ ಬದುಕುಳಿದಿದ್ದಾರೆ. ಡಿಎನ್ಎ ಪರಿಶೀಲನೆಯ ನಂತರ ಸಾವಿನ ಸಂಖ್ಯೆಯನ್ನು ಘೋಷಿಸಲಾಗುವುದು ಎಂದಿದ್ದಾರೆ.

ಸುಮಾರು 1000 ಡಿಎನ್ಎ ಪರೀಕ್ಷೆಗಳನ್ನು ಮಾಡಲಾಗುವುದು. ಮೃತ ದೇಹಗಳ ಡಿಎನ್ಎ ಮಾದರಿಗಳನ್ನು ಸಂಗ್ರಹಿಸಲಾಗಿದೆ. ಡಿಎನ್ಎ ಪರೀಕ್ಷೆಗಳ ನಂತರ ಶವಗಳನ್ನು ಹಸ್ತಾಂತರಿಸಲಾಗುವುದು. ವಿಮಾನಯಾನ ಸಚಿವರು ತನಿಖೆಯನ್ನು ತ್ವರಿತವಾಗಿ ನಡೆಸುವಂತೆ ಸೂಚನೆ ನೀಡಿದ್ದಾರೆ ಎಂದು ಶಾ ತಿಳಿಸಿದ್ದಾರೆ.

Related Posts

Leave a Reply

Your email address will not be published. Required fields are marked *