ಅಮೆರಿಕದ ವಸ್ತುಗಳ ಮೇಲಿನ ಆಮದು ಸುಂಕ ಇಳಿಸುವುದಾಗಿ ಒಪ್ಪಿಕೊಂಡಿಲ್ಲ ಎಂದು ಭಾರತ ಸ್ಪಷ್ಟನೆ ನೀಡುವ ಮೂಲಕ ಡೊನಾಲ್ಡ್ ಟ್ರಂಪ್ ಗೆ ಪರೋಕ್ಷವಾಗಿ ತಿರುಗೇಟು ನೀಡಿದೆ.
ಅಮೆರಿಕದ ಅಧ್ಯಕ್ಷರಾಗಿ ಎರಡನೇ ಬಾರಿ ಅಧಿಕಾರ ಸ್ವೀಕರಿಸಿದ ನಂತರ ಹಲವು ಕಠಿಣ ಕ್ರಮಗಳನ್ನು ಕೈಗೊಳ್ಳುತ್ತಿರುವ ಡೊನಾಲ್ಡ್ ಟ್ರಂಪ್ ತಮ್ಮ ದೇಶದ ವಸ್ತುಗಳ ಮೇಲೆ ಎಷ್ಟು ತೆರಿಗೆ ವಿಧಿಸಲಾಗುತ್ತದೆಯೋ ಅಷ್ಟೇ ಪ್ರಮಾಣದ ತೆರಿಗೆ ವಿಧಿಸಲಾಗುವುದು.
ಭಾರತ ನಮ್ಮ ದೇಶದ ಉತ್ಪನ್ನಗಳ ಮೇಲೆ ಭಾರೀ ಪ್ರಮಾಣದ ಸುಂಕ ವಿಧಿಸುತ್ತಿದೆ. ಇತ್ತೀಚೆಗೆ ಪ್ರಧಾನಿ ಮೋದಿ ಭೇಟಿ ವೇಳೆ ಸುಂಕ ಇಳಿಸುವುದಾಗಿ ಮಾತು ಕೊಟ್ಟಿದೆ. ಭಾರತದ ಬಂಡವಾಳ ಹೊರಬಿದ್ದ ನಂತರ ಯಾರೋ ಒಬ್ಬರು ಸುಂಕ ಇಳಿಸಲು ಮುಂದಾಗಿದ್ದಾರೆ ಎಂದು ಹೇಳಿಕೆ ನೀಡಿದ್ದರು.
ಡೊನಾಲ್ಡ್ ಟ್ರಂಪ್ ಹೇಳಿಕೆ ಬೆನ್ನಲ್ಲೇ ಇದೀಗ ಭಾರತ ಅಮೆರಿಕದ ವಸ್ತುಗಳ ಮೇಲಿನ ಸುಂಕ ಇಳಿಸುವುದಾಗಿ ಒಪ್ಪಿಕೊಂಡಿಲ್ಲ. ಅಲ್ಲದೇ ಈ ರೀತಿಯ ಮಾತು ಕೊಟ್ಟಿಲ್ಲ ಎಂದು ಸ್ಪಷ್ಟಪಡಿಸಿದೆ.
ಅಮೆರಿಕದ ಉತ್ಪನ್ನಗಳ ಮೇಲೆ ಸುಂಕ ಇಳಿಸುವ ಪ್ರಸ್ತಾಪ ನಮ್ಮ ಮುಂದೆ ಇಲ್ಲ. ಅಲ್ಲದೇ ಈ ರೀತಿ ನಾವು ಯಾವುದೇ ನಿರ್ಧಾರಕ್ಕೆ ಬಂದಿಲ್ಲ. ನಮಗೆ ಸೆಪ್ಟೆಂಬರ್ ವರೆಗೂ ಸಮಯವಕಾಶ ಬೇಕು ಎಂದು ತಿಳಿಸಲಾಗಿದೆ ಎಂದು ಭಾರತದ ಸಂಸದೀಯ ಸಮಿತಿ ಹೇಳಿಕೆಯಲ್ಲಿ ತಿಳಿಸಿದೆ.