ಮಹತ್ವದ ಚಾಂಪಿಯನ್ಸ್ ಟ್ರೋಫಿಗೆ ರೋಹಿತ್ ಶರ್ಮ ಸಾರಥ್ಯದ ಭಾರತ ತಂಡವನ್ನು ಪ್ರಕಟಿಸಲಾಗಿದೆ.
ಮುಂಬೈನಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ನಾಯಕ ರೋಹಿತ್ ಶರ್ಮ ಮತ್ತು ಆಯ್ಕೆ ಸಮಿತಿ ಅಧ್ಯಕ್ಷ ಅಜಿತ್ ಅಗರ್ಕರ್ ತಂಡವನ್ನು ಪ್ರಕಟಿಸಿದರು. ಆದರೆ ಕೋಚ್ ಗೌತಮ್ ಗಂಭೀರ್ ಅನುಪಸ್ಥಿತಿ ಹಲವು ಅನುಪಸ್ಥಿತಿ ಕಾಡಿತ್ತು.
ಫೆಬ್ರವರಿ 19ರಿಂದ ಆರಂಭಗೊಳ್ಳಲಿರುವ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ತಂಡವನ್ನು ರೋಹಿತ್ ಶರ್ಮ ಮುನ್ನಡೆಸಲಿದ್ದು, ಉಪನಾಯಕನಾಗಿ ಶುಭಮನ್ ಗಿಲ್ ಗೆ ಬಡ್ತಿ ನೀಡಲಾಗಿದೆ.
ಗಾಯದಿಂದ ಚೇತರಿಸಿಕೊಂಡರೂ ಆಸ್ಟ್ರೇಲಿಯಾ ಸರಣಿಯಿಂದ ಹೊರಗಿಡಲಾಗಿದ್ದ ಮಧ್ಯಮ ವೇಗಿ ಮೊಹಮದ್ ಶಮಿ ತಂಡಕ್ಕೆ ಮರಳಿದ್ದಾರೆ.
ಭಾರತ ತಂಡ
ರೋಹಿತ್ ಶರ್ಮ (ನಾಯಕ), ಶುಭಮನ್ ಗಿಲ್ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ರಿಷಭ್ ಪಂತ್ (ವಿಕೆಟ್ ಕೀಪರ್), ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ಅಕ್ಸರ್ ಪಟೇಲ್, ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಜಸ್ ಪ್ರೀತ್ ಬುಮ್ರಾ, ಮೊಹಮದ್ ಶಮಿ, ಅರ್ಷದೀಪ್ ಸಿಂಗ್.