ಗಾಯದಿಂದ ಚೇತರಿಸಕೊಳ್ಳದ ಮಧ್ಯಮ ವೇಗಿ ಜಸ್ ಪ್ರೀತ್ ಬುಮ್ರಾ ಚಾಂಪಿಯನ್ಸ್ ಟ್ರೋಫಿಗೆ ಪ್ರಕಟಿಸಲಾದ ಭಾರತ ತಂಡದಲ್ಲಿ ಸ್ಥಾನ ಪಡೆಯಲು ವಿಫಲರಾಗಿದ್ದಾರೆ.
ಬಿಸಿಸಿಐ ಆಯ್ಕೆ ಸಮಿತಿ ಮಂಗಳವಾರ ರಾತ್ರಿಯವರೆಗೂ ಜಸ್ ಪ್ರೀತ್ ಬುಮ್ರಾ ಅವರ ಫಿಟ್ನೆಸ್ ದೃಢೀಕರಣಕ್ಕಾಗಿ ಕಾಯುತ್ತಿತ್ತು. ಆದರೆ ಬುಮ್ರಾ ಅಲಭ್ಯ ಎಂಬ ವಿಷಯ ತಿಳಿಯುತ್ತಿದ್ದಂತೆ 15 ಸದಸ್ಯರ ತಂಡವನ್ನು ಪ್ರಕಟಿಸಿತು.
ಬೆನ್ನುನೋವಿನಿಂದ ನರಳುತ್ತಿರುವ ಜಸ್ ಪ್ರೀತ್ ಬುಮ್ರಾ ಸ್ಥಾನಕ್ಕೆ 23 ವರ್ಷದ ಹರ್ಷಿತ್ ರಾಣಾ ಸ್ಥಾನ ಪಡೆದಿದ್ದಾರೆ. ಹರ್ಷಿತ್ ರಾಣಾ ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಪ್ರದರ್ಶನ ನೀಡುತ್ತಿದ್ದು, 2 ಪಂದ್ಯಗಳಲ್ಲಿ 4 ವಿಕೆಟ್ ಕಬಳಿಸಿದ್ದಾರೆ.
ಇದೇ ವೇಳೆ ಯುವ ಆರಂಭಿಕ ಯಶಸ್ವಿ ಜೈಸ್ವಾಲ್ ಸ್ಥಾನ ಪಡೆಯಲು ವಿಫಲರಾಗಿದ್ದು, ಅವರ ಸ್ಥಾನಕ್ಕೆ 33 ವರ್ಷದ ಸ್ಪಿನ್ನರ್ ವರುಣ್ ಚಕ್ರವರ್ತಿ ಸ್ಥಾನ ಪಡೆದಿದ್ದಾರೆ. ಈ ಮೂಲಕ ತಂಡದಲ್ಲಿ ಎರಡು ಹೊಸ ಮುಖಗಳು ಕಾಣಿಸಿಕೊಂಡಿವೆ.
ಮೀಸಲು ಆಟಗರರಾಗಿ ಮೊಹಮದ್ ಸಿರಾಜ್, ಯಶಸ್ವಿ ಜೈಸ್ವಾಲ್ ಮತ್ತು ಶಿವಂ ದುಬೆ ಅವರನ್ನು ಆಯ್ಕೆ ಮಾಡಲಾಗಿದೆ. ಆದರೆ ಇವರು ತಂಡದ ಜೊತೆ ಪ್ರಯಾಣ ಬೆಳೆಸುವುದಿಲ್ಲ. ತಂಡಕ್ಕೆ ಅನಿವಾರ್ಯವಾದರೆ ಮಾತ್ರ ತಂಡವನ್ನು ಸೇರಿಕೊಳ್ಳಲಿದ್ದಾರೆ ಎಂದು ಬಿಸಿಸಿಐ ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದೆ.
ಭಾರತ ತಂಡ
ರೋಹಿತ್ ಶರ್ಮ (ನಾಯಕ), ಶುಭಮನ್ ಗಿಲ್, (ಉಪನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ರಿಷಭ್ ಪಂತ್, ಹಾರ್ದಿಕ್ ಪಾಂಡ್ಯ, ಅಕ್ಸರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ, ಮೊಹಮದ್ ಶಮಿ, ಅರ್ಷದೀಪ್ ಸಿಂಗ್, ರವೀಂದ್ರ ಜಡೇಜಾ.