ಮುಂಬೈ: ಸುದೀರ್ಘ ಚರ್ಚೆ ಹಾಗೂ ಗೊಂದಲಗಳ ನಂತರ ಮುಂಬರುವ ಏಷ್ಯಾಕಪ್ ಟಿ-20 ಟೂರ್ನಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ.
ನಾಯಕ ಸೂರ್ಯಕುಮಾರ್ ಯಾದವ್, ಮುಖ್ಯ ಕೋಚ್ ಗೌತಮ್ ಗಂಭೀರ್ ಹಾಗೂ ಆಯ್ಕೆ ಸಮಿತಿ ಅಧ್ಯಕ್ಷ ಅಜಿತ್ ಅಗರ್ಕರ್ ಮಂಗಳವಾರ 15 ಸದಸ್ಯರ ಭಾರತ ತಂಡವನ್ನು ಅಂತಿಮಗೊಳಿಸಿದೆ.
ಭಾರತ ಟೆಸ್ಟ್ ತಂಡದ ನಾಯಕ ಶುಭಮನ್ ಗಿಲ್ ಉಪನಾಯಕ ಸ್ಥಾನ ನೀಡಲಾಗಿದ್ದರೆ, ಯಶಸ್ವಿ ಜೈಸ್ವಾಲ್ ಮತ್ತು ಶ್ರೇಯಸ್ ಅಯ್ಯರ್ ಅವರನ್ನು ಕೈಬಿಡಲಾಗಿದೆ. ವಿಶೇಷ ಅಂದರೆ ಒಬ್ಬ ಕನ್ನಡಿಗನೂ ಈ ತಂಡದಲ್ಲಿ ಸ್ಥಾನ ಪಡೆಯಲು ವಿಫಲರಾಗಿದ್ದಾರೆ.
ಐಪಿಎಲ್ ನಲ್ಲಿ ಕಳೆದ ಬಾರಿ ಕಳಪೆ ಪ್ರದರ್ಶನದ ಹೊರತಾಗಿಯೂ ರಿಂಕು ಸಿಂಗ್ ಸ್ಥಾನ ಉಳಿಸಿಕೊಂಡಿದ್ದಾರೆ. ಗಾಯದ ಸಮಸ್ಯೆ ಎದುರಿಸುತ್ತಿರುವ ಜಸ್ ಪ್ರೀತ್ ಬುಮ್ರಾ ಕೂಡ ತಂಡದಲ್ಲಿ ಸ್ಥಾನ ಗಳಿಸಿದ್ದಾರೆ. ಮೀಸಲು ಆಟಗಾರರಾಗಿ 5 ಮಂದಿ ಸ್ಥಾನ ಗಳಿಸಿದ್ದಾರೆ.
ಭಾರತ ತಂಡ:
ಸೂರ್ಯಕುಮಾರ್ ಯಾದವ್ (ನಾಯಕ), ಶುಭಮನ್ ಗಿಲ್ (ಉಪನಾಯಕ), ಅಭಿಷೇಕ್ ಶರ್ಮ, ತಿಲಕ್ ವರ್ಮಾ, ಅಕ್ಸರ್ ಪಟೇಲ್, ಜಿತೇಶ್ ಶರ್ಮ (ವಿ.ಕೀ.), ಜಸ್ ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಕುಲದೀಪ್ ಯಾದವ್, ಸಂಜು ಸ್ಯಾಮ್ಸನ್ (ವಿ.ಕೀ.), ಹರ್ಷಿತ್ ರಾಣಾ, ರಿಂಕು ಸಿಂಗ್.