ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಹಾಗೂ ಏಕದಿನ ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದ್ದು, ಉಪನಾಯಕ ರಿಷಭ್ ಪಂತ್ ಟೆಸ್ಟ್ ತಂಡಕ್ಕೆ ಮರಳಿದ್ದರೆ, ಕನ್ನಡಿಗ ಪ್ರಸಿದ್ಧ ಕೃಷ್ಣ ಅವರನ್ನು ಕೈಬಿಡಲಾಗಿದೆ.
ನವೆಂಬರ್ 14ರಿಂದ ಆರಂಭಗೊಳ್ಳಲಿರುವ ಎರಡು ಪಂದ್ಯಗಳ ಟೆಸ್ಟ್ ಸರಣಿಗೆ ಬಿಸಿಸಿಐ ಆಯ್ಕೆ ಸಮಿತಿ 15 ಸದಸ್ಯರ ಭಾರತ ತಂಡವನ್ನು ಬುಧವಾರ ಪ್ರಕಟಿಸಿತು.
ಕರ್ನಾಟಕದ ಮಧ್ಯಮ ವೇಗಿ ಪ್ರಸಿದ್ಧ ಕೃಷ್ಣ ಅವರನ್ನು ಕಡೆಗಣಿಸಿರುವ ಆಯ್ಕೆ ಸಮಿತಿ ಪಶ್ಚಿಮ ಬಂಗಾಳದ ಅಕ್ಷ್ ದೀಪ್ ಅವರನ್ನು ಆಯ್ಕೆ ಮಾಡಿದೆ. ಅಲ್ಲದೇ ತಮಿಳುನಾಡಿನ ವಿಕೆಟ್ ಕೀಪರ್ ಜಗದೀಶನ್ ಅವರನ್ನು ತಂಡದಿಂದ ಕೈಬಿಡಲಾಗಿದೆ.
ಭಾರತ ತಂಡದ ಹಿರಿಯ ಬೌಲರ್ ಮೊಹಮದ್ ಶಮಿ ಅವರನ್ನು ಮತ್ತೊಮ್ಮೆ ಕಡೆಗಣಿಸಲಾಗಿದ್ದು, ಕ್ರಿಕೆಟ್ ಬದುಕು ಅಂತ್ಯಗೊಳ್ಳುವ ಸಾಧ್ಯತೆ ಇದೆ.
ನವೆಂಬರ್ 14ರಂದು ಕೋಲ್ಕತಾದ ಈಡನ್ ಗಾರ್ಡನ್ ಮೈದಾನದಲ್ಲಿ ಮೊದಲ ಟೆಸ್ಟ್ ನಡೆಯಲಿದ್ದರೆ, ಎರಡನೇ ಟೆಸ್ಟ್ ನವೆಂಬರ್ 22ರಿಂದ ಗುವಾಹತಿಯಲ್ಲಿ ನಡೆಯಲಿದೆ.
ಭಾರತ ಟೆಸ್ಟ್ ತಂಡ
ಶುಭಮನ್ ಗಿಲ್ (ನಾಯಕ), ರಿಷಭ್ ಪಂತ್ (ವಿಕೆಟ್ ಕೀಪರ್), ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಸಾಯಿ ಸುದರ್ಶನ್, ದೇವದತ್ ಪಡಿಕಲ್, ಧ್ರುವ ಜುರೆಲ್, ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ಜಸ್ ಪ್ರೀತ್ ಬುಮ್ರಾ, ಅಕ್ಸರ್ ಪಟೇಲ್, ನಿತೀಶ್ ಕುಮಾರ್ ರೆಡ್ಡಿ, ಮೊಹಮದ್ ಸಿರಾಜ್, ಕುಲದೀಪ್ ಯಾದವ್, ಅಕ್ಷ್ ದೀಪ್


