ದೇಶದಲ್ಲಿ ಕಳೆದ 24 ಗಂಟೆಯಲ್ಲಿ 764 ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 4 ಮಂದಿ ಮೃತಪಟ್ಟಿದ್ದಾರೆ.
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶನಿವಾರ ನೀಡಿದ ಮಾಹಿತಿ ಪ್ರಕಾರ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 5000 ಗಡಿ ದಾಟಿದೆ.
ದೇಶದಲ್ಲಿ ಪ್ರಸ್ತುತ ಕೊರೊನಾ ಸೋಂಕಿತರ ಸಂಖ್ಯೆ 5364ಕ್ಕೆ ಏರಿಕೆಯಾಗಿದ್ದು, ಕೇರಳದಲ್ಲಿ ಇಬ್ಬರು ಹಾಗೂ ಕರ್ನಾಟಕ ಮತ್ತು ಪಂಜಾಬ್ ನಲ್ಲಿ ತಲಾ ಒಬ್ಬರು ಸೋಂಕಿಗೆ ಬಲಿಯಾಗಿದ್ದಾರೆ.
ಕೇರಳದಲ್ಲಿ ಅತೀ ಹೆಚ್ಚು 192 ಹೊಸದಾಗಿ ಕೋವಿಡ್ ಪ್ರಕರಣಗಳು ವರದಿಯಾಗಿವೆ. ಗುಜರಾತ್ ನಲ್ಲಿ 107, ಬೆಂಗಾಲ್ ನಲ್ಲಿ 58, ದೆಹಲಿಯಲ್ಲಿ 30 ಪ್ರಕರಣಗಳು ದೃಢಪಟ್ಟಿವೆ. ಉಳಿದಂತೆ ದೇಶದಂತೆ 498 ಸೋಂಕು ಪ್ರಕರಣಗಳು ವರದಿಯಾಗಿವೆ.