ಬೆಂಗಳೂರು: ವೇಗವಾಗಿ ಬೈಕ್ ನಲ್ಲಿ ಹೋಗುತ್ತಿದ್ದ ಇನ್ಫೋಸಿಸ್ ಉದ್ಯೋಗಿಯೊಬ್ಬರು ಮುಂದಿನ ಗೂಡ್ಸ್ ವಾಹನಕ್ಕೆ ಡಿಕ್ಕಿ ಹೊಡೆದು ಮೃತಪಟ್ಟಿರುವ ದುರ್ಘಟನೆ ಹೊಂಗಸಂದ್ರದ ಮೆಟ್ರೋ ಸ್ಟೇಷನ್ ಬಳಿ ಶನಿವಾರ ಮುಂಜಾನೆ ನಡೆದಿದೆ.
ಎಲೆಕ್ಟ್ರಾನಿಕ್ ಸಿಟಿಯ ಇನ್ಫೋಸಿಸ್ ನ ಉದ್ಯೋಗಿ ಅಕ್ಷಯ್(27) ಮೃತಪಟ್ಟವರು, ರಾತ್ರಿ ಪಾಳಿಯಲ್ಲಿ ಕೆಲಸ ಮುಗಿಸಿಕೊಂಡು ಮುಂಜಾನೆ 3.30ರ ವೇಳೆ ಬೈಕ್ ನಲ್ಲಿ ಹೋಗುತ್ತಿದ್ದಾಗ ಮುಂದೆ ಹೋಗುತ್ತಿದ್ದ ಗೂಡ್ಸ್ ಗಾಡಿಗೆ ಡಿಕ್ಕಿ ಹೊಡೆದು ಕೆಳಗೆ ಬಿದ್ದು ಮೃತಪಟ್ಟಿರುತ್ತಾನೆ.
ಮಡಿವಾಳ ಸಂಚಾರ ಪೊಲೀಸರು ಅಪಘಾತ ಪ್ರಕರಣ ದಾಖಲು ಮಾಡಿಕೊಂಡು ಗೂಡ್ಸು ವಾಹನದ ಚಾಲಕನನ್ನು ವಶಕ್ಕೆ ಪಡೆದು ತನಿಖೆ ಕೈಗೊಂಡಿರುತ್ತಾರೆ.
ವೃದ್ಧ ದುರ್ಮರಣ:
ಪೀಣ್ಯ ದಾಸರಹಳ್ಳಿ ಮೆಟ್ರೋ ಸ್ಟೇಷನ್ ಬಳಿ ರಸ್ತೆದಾಟುತ್ತಿದ್ದಾಗ ಅಪರಿಚಿತ ವಾಹನ ಡಿಕ್ಕಿ ಹೊಡೆದು ವೃದ್ಧ ಪಣಿಕರ್ ಮೋಸಸ್(83) ಅವರು ಮೃತಪಟ್ಟಿದ್ದಾರೆ.
ಕಳೆದ ನ.9ರಂದು ಸಂಜೆ 6ರ ವೇಳೆ ಪೀಣ್ಯ ದಾಸರಹಳ್ಳಿ ಮೆಟ್ರೋ ಸ್ಟೇಷನ್ ಬಳಿ ನಡೆದ ಅಪಘಾತದಲ್ಲಿ ಗಾಯಗೊಂಡ ಮೋಸಸ್ ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದ್ದು,ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಪೀಣ್ಯ ಸಂಚಾರ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.


