Wednesday, August 05, 2026
Menu

ನಟ ದರ್ಶನ್‌ಗೆ ಜೈಲಿನಲ್ಲಿ ಮೂಲಸೌಕರ್ಯ: ವರದಿ ಸಲ್ಲಿಸುವಂತೆ ಸರ್ಕಾರಕ್ಕೆ ಸುಪ್ರೀಂ ಸೂಚನೆ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲುವಾಸಿಯಾಗಿರುವ ನಟ ದರ್ಶನ್‌ಗೆ ಜೈಲಿನಲ್ಲಿ ಮೂಲಸೌಕರ್ಯ ಒದಗಿಸಿರುವುದಕ್ಕೆ ಸಂಬಂಧಿಸಿದಂತೆ ವರದಿ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಸುಪ್ರೀಂಕೋರ್ಟ್ ನಿರ್ದೇಶನ ನೀಡಿದೆ.

ದರ್ಶನ್‌ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಜೆಬಿ ಪಾರ್ದಿವಾಲಾ ನೇತೃತ್ವದ ಪೀಠವು ರಾಜ್ಯ ಸರ್ಕಾರಕ್ಕೆ ಹಾಗೂ ವಿಚಾರಣಾಧೀನ ನ್ಯಾಯಾಲಯಕ್ಕೆ ವಾರದೊಳಗೆ ವರದಿ ಸಲ್ಲಿಸಲು ಸೂಚಿಸಿದೆ.

ಜೈಲಿನಲ್ಲಿ ಮೂಲಸೌಕರ್ಯ ಒದಗಿಸಲಾಗಿದೆಯೇ ಎಂದು ರಾಜ್ಯ ಸರ್ಕಾರಕ್ಕೆ ಹಾಗೂ ಸಾಕ್ಷಿಗಳ ವಿಚಾರಣೆ ಪ್ರಗತಿ ಬಗ್ಗೆ ವರದಿ ನೀಡುವಂತೆ ವಿಚಾರಣಾ ನ್ಯಾಯಾಲಯಕ್ಕೆ ನಿರ್ದೇಶನ ನೀಡಿದೆ.

ದರ್ಶನ್‌ಗೆ ಜೈಲಿನಲ್ಲಿ ಮೂಲಸೌಕರ್ಯ ನೀಡಿಲ್ಲ, ಬೆಳಕು ಇಲ್ಲದ ಸೆಲ್‌ನಲ್ಲಿ ಇರಿಸಲಾಗಿದೆ ಎಂದು ಹಿರಿಯ ವಕೀಲ ಮುಕುಲ್ ರೋಹಟಗಿ ವಾದಿಸಿದ್ದರು. ವಾದ ಆಲಿಸಿದ ನ್ಯಾಯಾಲಯ ಪ್ರಕರಣಕ್ಕೆ ಸಂಬಂಧಿಸಿದಂತೆ ಎಷ್ಟು ಸಾಕ್ಷಿಗಳ ವಿಚಾರಣೆಯಾಗಿದೆ. ಇನ್ನು ಉಳಿದ ಸಾಕ್ಷ್ಯಗಳ ವಿಚಾರಣೆಗೆ ಎಷ್ಟು ಸಮಯ ಬೇಕು ಎಂದು ವಾರದಲ್ಲಿ ವರದಿ ನೀಡುವಂತೆ ಸೂಚನೆ ನೀಡಿದೆ.

Related Posts

Leave a Reply

Your email address will not be published. Required fields are marked *