Wednesday, September 10, 2025
Menu

ಕನ್ನಡಕ್ಕೆ ಅವಮಾನ: ವಿಚಾರಣೆಗೆ ಹಾಜರಾಗದ ಸೋನು ನಿಗಮ್‌ ವಿರುದ್ಧ ಪೊಲೀಸರು ಮತ್ತೆ ಕೋರ್ಟ್‌ಗೆ

ಗಾಯಕ ಸೋನು ನಿಗಮ್ ಅವರು ಕನ್ನಡಿಗರ ಮನವಿಯನ್ನು ಪಹಲ್ಗಾಮ್ ದಾಳಿಗೆ ಹೋಲಿಸಿ ವಿವಾದಾತ್ಮಕ ಹೇಳಿಕೆ ನೀಡಿದ್ದ ಆರೋಪದಡಿ ಆವಲಹಳ್ಳಿ ಪೊಲೀಸರ ಎದುರು ವಿಚಾರಣೆಗೆ ಹಾಜರಾಗಿಲ್ಲ. ಈ ಕಾರಣಕ್ಕೆ ಈಗ ಈಗ ಪೊಲೀಸರು ಕಾನೂನು ಕ್ರಮಕ್ಕೆ ಮುಂದಾಗಿದ್ದಾರೆ.

ಬೆಂಗಳೂರಿನಲ್ಲಿ ನಡೆದ ಸಂಗೀತ ಕಾರ್ಯಕ್ರಮವೊಂದರಲ್ಲಿ ಗಾಯಕ ಸೋನು ನಿಗಮ್ ಅವರು ಕನ್ನಡಿಗರ ಮನವಿಯನ್ನು ಪಹಲ್ಗಾಮ್ ದಾಳಿಗೆ ಹೋಲಿಸಿ ನೀಡಿದ್ದ ವಿವಾದಾತ್ಮಕ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ, ಕನ್ನಡ ಪರ ಸಂಘಟನೆಗಳ ತೀವ್ರ ಆಕ್ರೋಶಕ್ಕೆ ಗುರಿಯಾಗಿದ್ದರು.

ಈ ಹಿನ್ನೆಲೆಯಲ್ಲಿ ಆವಲಹಳ್ಳಿ ಪೊಲೀಸರು ಸೋನು ನಿಗಮ್ ವಿರುದ್ಧ ಎಫ್‌ಐಆರ್ ದಾಖಲಿಸಿದ್ದರು. ತನಿಖೆಗೆ ಸಹಕರಿಸುವಂತೆ ಹೈಕೋರ್ಟ್ ಆದೇಶಿಸಿದ್ದರೂ ಸೋನು ನಿಗಮ್ ವಿಚಾರಣೆಗೆ ಹಾಜರಾಗದಿರುವುದು ಮತ್ತೊಂದು ವಿವಾದ ಹುಟ್ಟು ಹಾಕಿದೆ. ಹಾಗಾಗಿ ಪೊಲೀಸರು ಕಾನೂನು ಕ್ರಮಕ್ಕೆ ಮುಂದಾಗಿದ್ದಾರೆ.

ಕೆಲವು ತಿಂಗಳ ಹಿಂದೆ ಆವಲಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ನಡೆದ ಸಂಗೀತ ಕಾರ್ಯಕ್ರಮದಲ್ಲಿ ಕೆಲವು ಅಭಿಮಾನಿಗಳು ಕನ್ನಡದ ಹಾಡು ಹಾಡುವಂತೆ ಸೋನು ನಿಗಮ್‌ಗೆ ಮನವಿ ಮಾಡಿದ್ದರು. ಸೋನು ನಿಗಮ್  ಮನವಿಯನ್ನು ತಿರಸ್ಕರಿಸಿ ಕನ್ನಡವನ್ನು ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಹೋಲಿಸಿದ್ದರು. ಈ ಹೇಳಿಕೆಯ ವೀಡಿಯೊ, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿತ್ತು. ಕನ್ನಡ ಪರ ಸಂಘಟನೆಗಳು ತೀವ್ರವಾಗಿ ಕಂಡಿಸಿದ್ದವು.

ಆವಲಹಳ್ಳಿ ಪೊಲೀಸ್ ಠಾಣೆಯಲ್ಲಿ ಸೋನು ನಿಗಮ್ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು. ಎಫ್‌ಐಆರ್ ದಾಖಲಾದ ಬಳಿಕ ಸೋನು ನಿಗಮ್ ಹೈಕೋರ್ಟ್ ಮೊರೆ ಹೋಗಿದ್ದರು. ಹೈಕೋರ್ಟ್, ಸೋನು ನಿಗಮ್ ಅವರನ್ನು ಬಂಧಿಸಬಾರದು ಎಂದು ಆದೇಶಿಸಿ ತನಿಖೆಗೆ ಸಹಕರಿಸುವಂತೆ ಆದೇಶಿಸಿತ್ತು.

ಆವಲಹಳ್ಳಿ ಪೊಲೀಸರು ಸೋನು ನಿಗಮ್ ಅವರಿಗೆ ಮೂರು-ನಾಲ್ಕು ಬಾರಿ ನೋಟಿಸ್ ಜಾರಿ ಮಾಡಿದ್ದಾರೆ. ಫೋನ್ ಮೂಲಕವೂ ವಿಚಾರಣೆಗೆ ಹಾಜರಾಗುವಂತೆ ತಿಳಿಸಿದ್ದಾರೆ. ಆದರೆ ಸೋನು ನಿಗಮ್  ಪ್ರತಿಕ್ರಿಯೆ ನೀಡದೆ ವಿಚಾರಣೆಗೆ ಹಾಜರಾಗಿಲ್ಲ. ಆವಲಹಳ್ಳಿ ಪೊಲೀಸರು ಈಗ ಮತ್ತೆ ಹೈಕೋರ್ಟ್‌ಗೆ ಹೋಗಲು ಸಿದ್ಧತೆ ನಡೆಸಿದ್ದಾರೆ. ಹೈಕೋರ್ಟ್‌ನ ಮಧ್ಯಂತರ ಆದೇಶವನ್ನು ತೆರವುಗೊಳಿಸಲು ಅಡ್ವೊಕೇಟ್ ಜನರಲ್‌ಗೆ ಪತ್ರ ಬರೆಯಲು ತೀರ್ಮಾನಿಸಿದ್ದಾರೆ.

Related Posts

Leave a Reply

Your email address will not be published. Required fields are marked *