ಉಗ್ರರು ಕಾಶ್ಮೀರದಲ್ಲಿ ದಾಳಿ ನಡೆಸಬಹುದು ಎಂದು ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಹತ್ಯೆಗೆ ಮೊದಲೇ ಗುಪ್ತಚರ ಇಲಾಖೆಯು ಎಚ್ಚರಿಕೆ ನೀಡಿದ್ದ ವಿಚಾರ ಬಹಿರಂಗಗೊಂಡಿದೆ.
ಶ್ರೀನಗರ ಮತ್ತು ಸುತ್ತಮುತ್ತಲಿನ ಹೋಟೆಲ್‌ಗಳಲ್ಲಿ ತಂಗಿದ್ದ ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವ ಸಾಧ್ಯತೆ ಇದೆ ಎಂದು ಭದ್ರತಾ ಪಡೆ ಮತ್ತು ಸರ್ಕಾರಕ್ಕೆ ಗುಪ್ತಚರ ಮಾಹಿತಿ ನೀಡಿತ್ತು ಎಂದು ಅಧಿಕಾರಿಯೊಬ್ಬರು ಹೇಳಿರುವುದಾಗಿ ಮಾಧ್ಯಮವೊಂದು ವರದಿ ಮಾಡಿದೆ.
ಪ್ರಧಾನಿ ನರೇಂದ್ರ ಮೋದಿ ಏ.19 ರಂದು ಕಾತ್ರಾದಿಂದ ಶ್ರೀನಗರವನ್ನು ಸಂಪರ್ಕಿಸುವ ಮೊದಲ ರೈಲಿಗೆ ಚಾಲನೆ ನೀಡಬೇಕಿತ್ತು. ಆ ದಿನವೇ ಉಗ್ರರು ದಾಳಿ ನಡೆಸಲು ಪಿತೂರಿ ಮಾಡಿದ್ದರು ಎಂಬ ಮಾಹಿತಿ ಸಿಕ್ಕಿತ್ತು. ಹವಾಮಾನ ವೈಪರೀತ್ಯದ ಕಾರಣ ನಿಗದಿಯಾಗಿದ್ದ ಆ ಕಾರ್ಯಕ್ರಮ ರದ್ದಾಗಿತ್ತು. ದಾಳಿಯ ಬೆದರಿಕೆ ಯನ್ನು ಪರಿಗಣಿಸಿ ಶ್ರೀನಗರದ ದಾಲ್ ಸರೋವರ ಮತ್ತು ಮೊಘಲ್ ಉದ್ಯಾನವನದ ಮೇಲಿರುವ ಜಬರ್ವಾನ್ ಶ್ರೇಣಿಯ ತಪ್ಪಲಿನಲ್ಲಿ ಹೆಚ್ಚಿನ ಭದ್ರತಾ ವ್ಯವಸ್ಥೆ ಯನ್ನು ಕೈಗೊಳ್ಳಲಾಗಿತ್ತು.