Thursday, October 30, 2025
Menu

ಒಳ ಮೀಸಲು: ಸುಪ್ರೀಂಕೋರ್ಟ್ ನಿರ್ದೇಶನಗಳ ಪ್ರಕಾರ ಕಾಯ್ದೆ ಜಾರಿಗೆ ಕ್ರಮ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ  ವಿಧಾನಸೌಧದಲ್ಲಿ ಪರಿಶಿಷ್ಟ ಜಾತಿ ಒಳ ಮೀಸಲಾತಿಯ ಅನುಷ್ಠಾನದ ಕುರಿತಂತೆ ಇರುವ ಸಮಸ್ಯೆಗಳ ಬಗ್ಗೆ  ಸಭೆಯಲ್ಲಿ ಚರ್ಚಿಸಲಾಯಿತು. ಒಳ ಮೀಸಲುಲಾತಿ ಕುರಿತು  ಸುಪ್ರೀಂ ಕೋರ್ಟ್ ನಿರ್ದೇಶನಗಳ ಪ್ರಕಾರ ಕಾಯ್ದೆ ಜಾರಿಗೆ ಕ್ರಮ ಕೈಗೊಳ್ಳಲು ನಿರ್ಧರಿಸಲಾಗಿದೆ. 

 ಒಳ ಮೀಸಲಾತಿ ಕುರಿತಾಗಿ ಸಚಿವ ಸಂಪುಟ ಸಭೆಯ ತೀರ್ಮಾನಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಬೇಕು. ರೋಸ್ಟರ್ ಜಾರಿ ಕುರಿತಾಗಿ ಎಲ್ಲರ ಅಹವಾಲುಗಳನ್ನು ಆಲಿಸಬೇಕು. ಯಾವುದೇ ಜಾತಿಗಳಿಗೂ ರೋಸ್ಟರ್ನಲ್ಲಿ ಅನ್ಯಾಯವಾಗದಂತೆ ಖಾತ್ರಿಪಡಿಸಬೇಕು ಎಂದು ಮುಖ್ಯಮಂತ್ರಿ  ಸೂಚನೆ ನೀಡಿದರು.

ಜಾತಿ ಪ್ರಮಾಣ ಪತ್ರ ಯಾವ ರೀತಿಯಲ್ಲಿ ನೀಡಬೇಕು ಎಂಬ ಕುರಿತು ವಿವರವಾದ ಮಾರ್ಗಸೂಚಿಯನ್ನು ಬಿಡುಗಡೆಗೊಳಿಸಲಾಗಿದೆ. ನೇಮಕಾತಿಗೆ ಇದ್ದ ನಿರ್ಬಂಧವನ್ನು ತೆರವುಗೊಳಿಸಿದ ಬಳಿಕ ಅಭ್ಯರ್ಥಿಗಳ ವಯೋಮಿತಿಯನ್ನು ಒಂದು ಅವಧಿಗೆ ಹೆಚ್ಚಳ ಮಾಡಲಾಗಿದೆ. ಕೆಇಎಯಲ್ಲಿ ಈಗಾಗಲೇ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ ಎಂದು ಮಾಹಿತಿ ನೀಡಿದರು.

ಸಚಿವರಾದ ಜಿ.ಪರಮೇಶ್ವರ್, ಎಚ್.ಸಿ.ಮಹಾದೇವಪ್ಪ, ಕೆ.ಎಚ್.ಮುನಿಯಪ್ಪ, ಶಿವರಾಜ ತಂಗಡಗಿ, ಎಚ್.ಕೆ.ಪಾಟೀಲ್, ಪ್ರಿಯಾಂಕ ಖರ್ಗೆ, ಬಿ.ಆರ್.ತಿಮ್ಮಾಪುರ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಅಪರ ಮುಖ್ಯಕಾರ್ಯದರ್ಶಿ ಅಂಜುಂ ಪರ್ವೇಜ್, ಮತ್ತಿತರರು ಉಪಸ್ಥಿತರಿದ್ದರು.

Related Posts

Leave a Reply

Your email address will not be published. Required fields are marked *