ಅಂತರಾಜ್ಯ ಜಲವಿವಾದ ಚರ್ಚೆ; ಸರ್ವಪಕ್ಷ ಸಭೆಗೆ ನಿರ್ಧಾರ

ಬೆಂಗಳೂರು: ಜನೆವರಿ 22 (ಉದಯಕಾಲ) ಅಂತರಾಜ್ಯ ಜಲವಿವಾದಗಳ ಬಗ್ಗೆ ಸರ್ವ ಪಕ್ಷಗಳ ಸಭೆ ಕರೆಯುವುದಾಗಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಜಲ ವಿವಾದಗಳ ಕುರಿತಂತೆ ತಜ್ಞರೊಂದಿಗೆ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ಕೃಷ್ಣಾ, ಕಾವೇರಿ, ಮಹಾದಾಯಿ ಯೋಜನೆಗಳ ಬಗ್ಗೆ ಕೋರ್ಟಿನಲ್ಲಿ ವಿವಿಧ ಹಂತಗಳಲ್ಲಿ ಇರುವ ಕೇಸ್ ಗಳ ಬಗ್ಗೆ ಚರ್ಚೆ ಮಾಡಲಾಗಿದೆ. ಜನವರಿ ಅಂತ್ಯದಲ್ಲಿ ಮತ್ತೊಂದು ವರ್ಚುವಲ್ ಸಭೆ ಮಾಡ್ತೇವೆ. ಫೆಬ್ರವರಿ ಮೊದಲ ವಾರದಲ್ಲಿ ಸರ್ವಪಕ್ಷಗಳ‌ ಸಭೆ ಕರೆಯಲಾಗುತ್ತದೆ. ಕಾನೂನಿನ ಹೋರಾಟದ ಪ್ರಗತಿ, ಮುಂದಿನ ನಿಲುವಿನ ಬಗ್ಗೆ ಈ ಸಭೆಯಲ್ಲಿ ಚರ್ಚೆ ಮಾಡಿ ಸಲಹೆ ಪಡೆಯುತ್ತೇವೆ ಎಂದರು.
ಸಭೆ ಬಳಿಕ ಜಲಸಂಪನ್ಮೂಲ ಖಾತೆ ಸಚಿವ ಗೋವಿಂದ ಕಾರಜೋಳ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯಕ್ಕೆ ಸಂಬಂಧಿಸಿದ ಅಂತರರಾಜ್ಯ ಜಲ ವಿವಾದಗಳ ಬಗ್ಗೆ ಚರ್ಚೆ ನಡೆಯಿತು. ಸುಪ್ರೀಂಕೋರ್ಟ್ ನಲ್ಲಿರುವ ಪ್ರಕರಣಗಳ ಬಗ್ಗೆ ಕಾನೂನು ತಂಡದ ಜತೆ ಚರ್ಚೆ ನಡೆಸಲಾಯಿತು. ಈ ವೇಳೆ ಕೆಲವು ನಿರ್ದೇಶನಗಳನ್ನು ಮುಖ್ಯಮಂತ್ರಿ ನೀಡಿದ್ದಾರೆ ಎಂದರು.
ಮೇಕೆದಾಟು ಬಗ್ಗೆ ಪೂರ್ಣ ಮಾಹಿತಿ ಪಡೆಯಲಾಗಿದೆ. ಫೆ.14 ರಂದು ಮತ್ತೆ ಸುಪ್ರೀಂ ಕೋರ್ಟಿನಲ್ಲಿ ಇದರ ವಿಚಾರಣೆ ಇದೆ. ಇದಕ್ಕೂ ಮುನ್ನ ಮತ್ತೊಮ್ಮೆ ಸಿಎಂ ಸಭೆ ನಡೆಸ್ತಾರೆ. ಮಹದಾಯಿ ಪ್ರಕರಣದಲ್ಲಿ ಅಂತಿಮ ವಿಚಾರಣೆ ಬಾಕಿ ಇದೆ. ಇದರ ಜತೆ ಸುಪ್ರೀಂಕೋರ್ಟ್ ನಲ್ಲಿ ಬಾಕಿ ಇರುವ ಎಲ್ಲ ಪ್ರಕರಣಗಳನ್ನು ಶೀಘ್ರವಾಗಿ ಮುಗಿಸಲು ಸೂಚಿಸಲಾಗಿದೆ ಎಂದು ವಿವರ ನೀಡಿದರು

,

Leave a Reply

Your email address will not be published. Required fields are marked *