ಪಂಜಾಬ್ ತಂಡದ ವಿರುದ್ಧ ಇಂದು ಫೈನಲ್ ಪಂದ್ಯವಾಡುತ್ತಿರುವ ನಮ್ಮ ಆರ್‌ಸಿಬಿ ತಂಡಕ್ಕೆ ಶುಭ ಹಾರೈಕೆಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಮಾಜಿಕ ಖಾತೆ ಎಕ್ಸ್ ಪೋಸ್ಟ್ ಮೂಲಕ ಶುಭ ಹಾರೈಸಿದ್ದಾರೆ.
ಆರ್‌ಸಿಬಿ ತಂಡದ ಸೋಲು- ಗೆಲುವು, ಏಳು- ಬೀಳುಗಳಲ್ಲಿ ಸದಾ ಜೊತೆ ನಿಂತು, ಮೊದಲ ಆವೃತ್ತಿಯಿಂದ ಇಂದಿನವರೆಗೂ ಅದೇ ರೀತಿಯ ಪ್ರೀತಿ, ಸ್ಫೂರ್ತಿ ನೀಡುತ್ತಿರುವ ಕೋಟ್ಯಂತರ ಅಭಿಮಾನಿಗಳಿಗಾಗಿ ಈ ಬಾರಿ ಆರ್‌ಸಿಬಿ ಕಪ್ ಗೆಲ್ಲಲಿ ಎನ್ನುವುದು ನನ್ನ ಅಂತರಾಳದ ಬಯಕೆ ಎಂದು ಬರೆದುಕೊಂಡಿದ್ದಾರೆ.
ತಾಳ್ಮೆಯ ಫಲ ಸಿಹಿಯಾಗಿರುತ್ತದೆಯಂತೆ, ಆ ಸಿಹಿ ಇಂದು ಕನ್ನಡಿಗರ ಮತ್ತು ಜಗತ್ತಿನಾದ್ಯಂತ ಇರುವ ಆರ್‌ಸಿಬಿ ಅಭಿಮಾನಿಗಳ ಪಾಲಿಗಿರಲಿ ಎಂದು ಹಾರೈಸುತ್ತೇನೆ ಎಂದಿದ್ದಾರೆ.
ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರೂ ಕೂಡ ಆರ್‌ಸಿಬಿ ಗೆಲುವಿಗೆ ಹಾರೈಸಿ, ಈ ಸಲ ಕಪ್ ನಮ್ದೇ ಎಂದು ಹೇಳಿದ್ದಾರೆ.
ಪಂಜಾಬ್ ತಂಡದ ವಿರುದ್ಧ ಇಂದು ಫೈನಲ್ ಪಂದ್ಯವಾಡುತ್ತಿರುವ ನಮ್ಮ ಆರ್‌ಸಿಬಿ ತಂಡಕ್ಕೆ ಶುಭ ಹಾರೈಕೆಗಳು.
ಆರ್‌ಸಿಬಿ ತಂಡದ ಸೋಲು – ಗೆಲುವು, ಏಳು – ಬೀಳುಗಳಲ್ಲಿ ಸದಾ ಜೊತೆ ನಿಂತು, ಮೊದಲ ಆವೃತ್ತಿಯಿಂದ ಇಂದಿನವರೆಗೂ ಅದೇ ರೀತಿಯ ಪ್ರೀತಿ – ಸ್ಪೂರ್ತಿ ನೀಡುತ್ತಿರುವ ಕೋಟ್ಯಂತರ ಅಭಿಮಾನಿಗಳಿಗಾಗಿ ಈ ಬಾರಿ ಆರ್‌ಸಿಬಿ ಕಪ್ ಗೆಲ್ಲಲಿ ಎನ್ನುವುದು… pic.twitter.com/HLVNvXgCtd
— Siddaramaiah (@siddaramaiah) June 3, 2025