ಸಂಘಟಿತ ಪ್ರದರ್ಶನ ನೀಡಿದ ಪಂಜಾಬ್ ಕಿಂಗ್ಸ್ ತಂಡ 8 ವಿಕೆಟ್ ಗಳಿಂದ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಸೋಲಿಸಿ ಐಪಿಎಲ್ ಟಿ-20 ಟೂರ್ನಿಯಲ್ಲಿ ಸತತ ಎರಡನೇ ಗೆಲುವು ದಾಖಲಿಸಿದೆ.
ಲಕ್ನೋದಲ್ಲಿ ಮಂಗಳವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು 20 ಓವರ್ ಗಳಲ್ಲಿ 7 ವಿಕೆಟ್ ಗೆ 171 ರನ್ ಗಳಿಗೆ ನಿಯಂತ್ರಿಸಿದ ಪಂಜಾಬ್ ಕಿಂಗ್ಸ್ 16.2 ಓವರ್ ಗಳಲ್ಲಿ 2 ವಿಕೆಟ್ ಕಳೆದುಕೊಂಡು ಜಯಭೇರಿ ಬಾರಿಸಿತು. ಸತತ ಎರಡನೇ ಸ್ಥಾನಕ್ಕೇರಿದರೆ, ಆರ್ ಸಿಬಿ ಅಗ್ರಸ್ಥಾನದಲ್ಲಿದೆ.
ಪಂಜಾಬ್ ತಂಡಕ್ಕೆ ಪ್ರಭ್ ಸಿಮ್ರನ್ ಮತ್ತು ನಾಯಕ ಶ್ರೇಯಸ್ ಅಯ್ಯರ್ ಅರ್ಧಶತಕಗಳನ್ನು ಬಾರಿಸಿದ್ದೂ ಅಲ್ಲದೇ ಎರಡನೇ ವಿಕೆಟ್ ಗೆ 84 ರನ್ ಜೊತೆಯಾಟದಿಂದ ತಂಡವನ್ನು ಆಧರಿಸಿದರು. ಪ್ರಭ್ ಸಿಮ್ರನ್ 34 ಎಸೆತಗಳಲ್ಲಿ 9 ಬೌಂಡರಿ ಮತ್ತು 3 ಸಿಕ್ಸರ್ ಒಳಗೊಂಡ 69 ರನ್ ಚಚ್ಚಿದರೆ, ಅಯ್ಯರ್ 30 ಎಸೆತಗಳಲ್ಲಿ 3 ಬೌಂಡರಿ ಮತ್ತು 4 ಸಿಕ್ಸರ್ ಸಹಾಯದಿಂದ 52 ರನ್ ಸಿಡಿಸಿದರು.