ಮುಂಬೈ: ಭಾರತ- ಪಾಕಿಸ್ತಾನ ಉದ್ವಿಗ್ನ ಪರಿಸ್ಥಿತಿ ಹಿನ್ನೆಲೆಯಲ್ಲಿ ದೇಶದಲ್ಲಿ ನಡೆಯುತ್ತಿರುವ ಪ್ರತಿಷ್ಠಿತ ಐಪಿಎಲ್ ಟೂರ್ನಿಯನ್ನು ರದ್ದುಗೊಳಿಸಿ ಬಿಸಿಸಿಐ ಆದೇಶ ಹೊರಡಿಸಿದೆ.
ಬಿಸಿಸಿಐ ಆದೇಶದ ಹಿನ್ನೆಲೆಯಲ್ಲಿ ಇಂದು ನಡೆಯಬೇಕಿದ್ದ ಆರ್ ಸಿಬಿ ಮತ್ತು ಲಕ್ನೋ ಸೂಪರ್ ಜೈಂಟ್ಸ್ ನಡುವಣ ಪಂದ್ಯ ಕೂಡ ರದ್ದಾಗಿದೆ. ಅಲ್ಲದೇ ಮೇ 25ರವರೆಗೆ ನಡೆಯಬೇಕಿದ್ದ ಎಲ್ಲಾ ಪಂದ್ಯಗಳನ್ನು ರದ್ದುಗೊಳಿಸಲಾಗಿದೆ.
ನಿನ್ನೆ ಧರ್ಮಶಾಲಾದಲ್ಲಿ ನಡೆದ ಪಂಜಾಬ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವೆ ಧರ್ಮಶಾಲಾದ ಪಂದ್ಯವನ್ನು ಏಕಾಏಕಿ ರದ್ದುಗೊಳಿಸಿ ಉಭಯ ತಂಡಗಳಿಗೆ ಅಂಕ ಹಂಚಿಕೆ ಮಾಡಲಾಗಿತ್ತು.
ಭಾರತ ಮತ್ತು ಪಾಕಿಸ್ತಾನ ನಡುವಣ ಉದ್ವಿಗ್ನ ಪರಿಸ್ಥಿತಿ ಹಿನ್ನೆಲೆಯಲ್ಲಿ ಆಟಗಾರರ ಸುರಕ್ಷತೆ ದೃಷ್ಟಿಯಿಂದ ತತ್ ಕ್ಷಣದಿಂದಲೇ ಜಾರಿಗೆ ಬರುವಂತೆ ಐಪಿಎಲ್ ಪಂದ್ಯಗಳನ್ನು ರದ್ದುಗೊಳಿಸಲಾಗಿದೆ.