ಮುಂಬೈ: ಐಪಿಎಲ್ ಟಿ-20 ಟೂರ್ನಿಯನ್ನು ಸಂಪೂರ್ಣವಾಗಿ ರದ್ದುಪಡಿಸಿಲ್ಲ. ಬದಲಾಗಿ ಒಂದು ವಾರದ ಅವಧಿಗೆ ಮಾತ್ರ ಮುಂದೂಡಲಾಗಿದೆ ಎಂದು ಬಿಸಿಸಿಐ ಸ್ಪಷ್ಟಪಡಿಸಿದೆ.
ಬಿಸಿಸಿಐ ಒಂದು ವಾರದ ಅವಧಿಗೆ ಮಾತ್ರ ಐಪಿಎಲ್ ಪಂದ್ಯಗಳನ್ನು ಅಮಾನತು ಮಾಡಲಾಗಿದೆ ಎಂದು ಅಧಿಕೃತ ಹೇಳಿಕೆಯಲ್ಲಿ ಪ್ರಕಟಿಸಿದೆ.
ಪಂಜಾಬ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವೆ ಗುರುವಾರ ಧರ್ಮಶಾಲಾದಲ್ಲಿ ನಡೆಯುತ್ತಿದ್ದ ಪಂದ್ಯವನ್ನು ಮಧ್ಯದಲ್ಲೇ ರದ್ದುಗೊಳಿಸಿದ್ದ ಬಿಸಿಸಿಐ ಶುಕ್ರವಾರ ಅಧಿಕೃತ ಪ್ರಕಟಣೆಯಲ್ಲಿ ಟೂರ್ನಿಯನ್ನು ಒಂದು ವಾರದ ಅವಧಿಗೆ ಮಾತ್ರ ಮುಂದೂಡಲಾಗಿದೆ ಎಂದು ಸ್ಪಷ್ಟಪಡಿಸಿದೆ.
ಪ್ರಸ್ತುತ ಪರಿಸ್ಥಿತಿಯನ್ನು ಅವಲೋಕಿಸಿದ ನಂತರ ಟೂರ್ನಿಯ ಸಮಗ್ರ ಮಾಹಿತಿ ಸಂಗ್ರಹಿಸಿ ನೂತನ ವೇಳಾಪಟ್ಟಿ ಹಾಗೂ ಪಂದ್ಯ ನಡೆಯುವ ಮೈದಾನಗಳನ್ನು ಪ್ರಕಟಿಸಲಾಗುವುದು ಎಂದು ಬಿಸಿಸಿಐ ಅಂಗ ಸಂಸ್ಥೆಯಾದ ಐಪಿಎಲ್ ಹೇಳಿಕೆ ಬಿಡುಗಡೆ ಮಾಡಿದೆ.