ತವರಿನಲ್ಲಿ ಮೊದಲ ಐಪಿಎಲ್ ಟಿ-20 ಪಂದ್ಯ ಆಡುತ್ತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಟಾಸ್ ಸೋತು ಗುಜರಾತ್ ಟೈಟಾನ್ಸ್ ವಿರುದ್ಧ ಮೊದಲು ಬ್ಯಾಟ್ ಮಾಡುವ ಅವಕಾಶ ಪಡೆದಿದೆ.
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಟಾಸ್ ಗೆದ್ದು ರನ್ ಚೇಸ್ ಮಾಡಲು ನಿರ್ಧರಿಸಿತು.
ಸತತ ಎರಡು ಪಂದ್ಯ ಗೆದ್ದು ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿರುವ ಆರ್ ಸಿಬಿಗೆ ಇದು ಮೊದಲ ತವರಿನ ಪಂದ್ಯವಾಗಿದೆ. ಆತ್ಮವಿಶ್ವಾಸದಲ್ಲಿ ಬೀಗುತ್ತಿರುವ ಆರ್ ಸಿಬಿ ತಂಡದಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ.
ಗುಜರಾತ್ ಟೈಟಾನ್ಸ್ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದ್ದು, ವೈಯಕ್ತಿಕ ಕಾರಣಕ್ಕೆ ಕಾಗಿಸೊ ರಬಡಾ ಬದಲಿಗೆ ಅರ್ಷದ್ ಖಾನ್ ಸೇರ್ಪಡೆಗೊಂಡಿದ್ದಾರೆ.
ಈ ಪಂದ್ಯದಲ್ಲಿ 24 ರನ್ ಗಳಿಸಿದರೆ ವಿರಾಟ್ ಕೊಹ್ಲಿ ಟಿ-20 ಕ್ರಿಕೆಟ್ ನಲ್ಲಿ 13 ಸಾವಿರ ರನ್ ಪೂರೈಸಿದ ಸಾಧನೆ ಮಾಡಲಿದ್ದಾರೆ.